ADVERTISEMENT

ದೊಡ್ಡಬಳ್ಳಾಪುರ: ಸರ್ಕಾರಿ ಕಾಲೇಜಿನ ಮೂವರಿಗೆ ರ‍್ಯಾಂಕ್‌

​ಪ್ರಜಾವಾಣಿ ವಾರ್ತೆ
Published 2 ಜೂನ್ 2022, 8:52 IST
Last Updated 2 ಜೂನ್ 2022, 8:52 IST
ಅಂಬುಜಾಕ್ಷಿ
ಅಂಬುಜಾಕ್ಷಿ   

ದೊಡ್ಡಬಳ್ಳಾಪುರ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತ್ತರ ಕೇಂದ್ರದ ಇತಿಹಾಸ ವಿಭಾಗದ ಮೂರು ಜನ ವಿದ್ಯಾರ್ಥಿಗಳು ರ‍್ಯಾಂಕ್‌ ಪಡೆದಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಪ್ರೊ.ಎನ್‌. ಶ್ರೀನಿವಾಸಯ್ಯ ತಿಳಿಸಿದ್ದಾರೆ.

ಬೆಂಗಳೂರು ಉತ್ತರ ವಿಶ್ವ ವಿಶ್ವವಿದ್ಯಾಲಯದ ವತಿಯಿಂದ ನಡೆದಿದ್ದ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿಗಳಾದ ಎನ್‌.ಅಂಬುಜಾಕ್ಷಿ 2ನೇ ರ‍್ಯಾಂಕ್‌, ಕೆ.ಎಸ್‌.ನಾಗೇಶ್‌ 4ನೇ ರ‍್ಯಾಂಕ್‌ ಹಾಗೂ ಡಿ.ಎಸ್‌.ಮಮತಾಕುಮಾರಿ 5ನೇ ರ‍್ಯಾಂಕ್‌ ಪಡೆದಿದ್ದಾರೆ.

ವಿದ್ಯಾರ್ಥಿಗಳನ್ನು ಶಾಸಕ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಟಿ.ವೆಂಕಟರಮಣಯ್ಯ, ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ.ಸದಾಶಿವ ರಾಮಚಂದ್ರಗೌಡ ಅಭಿನಂದಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.