ADVERTISEMENT

₹ 25 ಲಕ್ಷ ಮೌಲ್ಯದ ರಕ್ತಚಂದನ ವಶ: ಮೂವರ ಸೆರೆ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2022, 20:45 IST
Last Updated 1 ಆಗಸ್ಟ್ 2022, 20:45 IST
ಆನೇಕಲ್ ತಾಲ್ಲೂಕಿನ ಬೊಮ್ಮಸಂದ್ರದ ಬಳಿ ಪೊಲೀಸರು ಬಂಧಿಸಿರುವ ರಕ್ತಚಂದನ ಸಾಗಿಸುತ್ತಿದ್ದ ಆರೋಪಿಗಳು
ಆನೇಕಲ್ ತಾಲ್ಲೂಕಿನ ಬೊಮ್ಮಸಂದ್ರದ ಬಳಿ ಪೊಲೀಸರು ಬಂಧಿಸಿರುವ ರಕ್ತಚಂದನ ಸಾಗಿಸುತ್ತಿದ್ದ ಆರೋಪಿಗಳು   

ಆನೇಕಲ್:ತಾಲ್ಲೂಕಿನ ಬೊಮ್ಮಸಂದ್ರದ ಬಳಿ ರಕ್ತಚಂದನ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಆನೇಕಲ್‌ ಉಪ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ಸರ್ಜಾಪುರದ ಬಷೀರ್ ಅಹಮದ್,ಅಡಿಗಾರಕಲ್ಲಹಳ್ಳಿಯ ನಿಜಾಮ್‌ ಮತ್ತು ತೋಷಿದ್‌ ಬಂಧಿತರು.

ಆರೋಪಿಗಳಿಂದ ₹ 25 ಲಕ್ಷ ಬೆಲೆ ಬಾಳುವ 750 ಕೆ.ಜಿಯಷ್ಟು ರಕ್ತಚಂದನ ವಶಪಡಿಸಿಕೊಂಡಿದ್ದಾರೆ.ಆರೋಪಿಗಳು ಸರಕು ಸಾಗಣೆ ವಾಹನದಲ್ಲಿ ರಕ್ತಚಂದನ ಸಾಗಾಟ ಮಾಡು
ತ್ತಿದ್ದರು.

ಖಚಿತ ಮಾಹಿತಿ ಮೇರೆಗೆ ಡಿವೈಎಸ್‌ಪಿ ಮಲ್ಲೇಶ್‌ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿದೆ. ಸರ್ಕಲ್‌ ಇನ್‌ಸ್ಪೆಕ್ಟರ್‌ ಜಗದೀಶ್‌ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.