ADVERTISEMENT

ಫೆ.9ಕ್ಕೆ ರೇಣುಕಾ ಯಲ್ಲಮ್ಮದೇವಿ ಜಾತ್ರೆ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2020, 14:18 IST
Last Updated 6 ಫೆಬ್ರುವರಿ 2020, 14:18 IST

ಮಾಗಡಿ: ಸೋಲೂರಿನ ರೇಣುಕಾ ಯಲ್ಲಮ್ಮದೇವಿ ದೇವಾಲಯ ಟ್ರಸ್ಟ್‌ ವತಿಯಿಂದ ಫೆ.9ರಂದು ಬೆಳಿಗ್ಗೆ 10ಕ್ಕೆ ಭರತ ಹುಣ್ಣಿಮೆ ಅಂಗವಾಗಿ ಜಾತ್ರೆ ನಡೆಯಲಿದೆ.

ಜಾತ್ರೆ ಅಂಗವಾಗಿ ಮಾತಂಗಿ, ಚೌಡಿಕೆ ಕುಣಿತ, ವೀರಗಾಸೆ, ಡೊಳ್ಳುಕುಣಿತ, ಕೀಲುಕುದುರೆ, ಬೆದರುಗೊಂಬೆ, ಪಟಕುಣಿತ, ಪೂಜಾ ಕುಣಿತ ಜನಪದ ಕಲಾತಂಡಗಳು ಭಾಗವಹಿಸಲಿವೆ.

ರೇಣುಕಾ ಯಲ್ಲಮ್ಮದೇವಿಗೆ ವಿಶೇಷ ಅಲಂಕಾರ ಮಾಡಿ ಉತ್ಸವ‌ಮೂರ್ತಿ ಮೆರವಣಿಗೆ ನಡೆಸಲಾಗುವುದು. ಕರ್ನಾಟಕ ರಾಜ್ಯ ಆರ್ಯ ಈಡಿಗರ ಸಂಘದ ಪದಾಧಿಕಾರಿಗಳು ಹಾಗೂ ಭಕ್ತರು ಭಾಗವಹಿಸಲಿದ್ದಾರೆ ಎಂದು ತಾಲ್ಲೂಕು ಆರ್ಯ ಈಡಿಗರ ಸಂಘದ ಅಧ್ಯಕ್ಷ ಎಂ.ಜಿ.ಗೋಪಾಲ್‌ ಈಡಿಗ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.