
ಆನೇಕಲ್: ತಾಲ್ಲೂಕಿನ ಸುರಗಜಕ್ಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿಡಿಹೊಸಕೋಟೆ ಗ್ರಾಮದ ರೇಣುಕಾ ಯಲ್ಲಮ್ಮ ದೇವಿ ದೇವಾಲಯದ ಜಾತ್ರ ಮಹೋತ್ಸವ ಮತ್ತು ದೀಪೋತ್ಸವ ಮಂಗಳವಾರ ವಿಜೃಂಭಣೆಯಿಂದ ನಡೆಯಿತು.
ದೇವಾಲಯದಲ್ಲಿ ಬೆಳಗಿನಿಂದಲೂ ಪೂಜೆ ಏರ್ಪಡಿಸಲಾಗಿತ್ತು. ಸುತ್ತಮುತ್ತಲ ಗ್ರಾಮಸ್ಥರು ದರ್ಶನ ಪಡೆದರು. ಮಹಿಳೆಯರು ಅಲಂಕೃತ ದೀಪ ಹೊತ್ತು ದೇವಿಗೆ ಆರತಿ ಸಲ್ಲಿಸಿ ಭಕ್ತಿ ಸಮರ್ಪಿಸಿದರು.
ಡೋಲು ಮತ್ತು ನಾದಸ್ವರ ಕಲಾವಿದರಯ ಆಕರ್ಷಕ ಪ್ರದರ್ಶನ ನೀಡಿದರು. ದೀಪೋತ್ಸವದ ಪ್ರಯುಕ್ತ ಅನ್ನದಾಸೋಹ ಏರ್ಪಡಿಸಲಾಗಿತ್ತು.
ದೇವಾಲಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಖಾಸಗಿ ಬಡಾವಣೆಯವರು ಮುಚ್ಚಿದ್ದಾರೆಎಂದು ಗ್ರಾಮಸ್ಥರು ಆನೇಕಲ್ ಯೋಜನಾ ಪ್ರಾಧಿಕಾರಕ್ಕೆ ದೂರು ನೀಡಿದ್ದಾರೆ ಎಂದು ಸುರಗಜಕ್ಕನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸಿಡಿಹೊಸಕೋಟೆ ಮುನಿರಾಜು ಹೇಳಿದ್ದಾರೆ.
ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಕೃಷಿ ಜಮೀನುಗಳಿಗೆ ಮತ್ತು ದೇವಾಲಯಕ್ಕೆ ಓಡಾಡುವ ಸಲುವಾಗಿ ಕಾಂಪೌಂಡ್ ತೆರವುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.