ADVERTISEMENT

ಅಂಬೇಡ್ಕರ್ ಭಾವಚಿತ್ರ ಮೆರವಣಿಗೆಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 24 ಜನವರಿ 2020, 12:38 IST
Last Updated 24 ಜನವರಿ 2020, 12:38 IST
ಎಸ್.ಮಂಜುನಾಥ್ ಭಾರತೀಯ ಮಾನವ ಹಕ್ಕುಗಳ ಜಾಗೃತಿ ವೇದಿಕೆ ಅಧ್ಯಕ್ಷ
ಎಸ್.ಮಂಜುನಾಥ್ ಭಾರತೀಯ ಮಾನವ ಹಕ್ಕುಗಳ ಜಾಗೃತಿ ವೇದಿಕೆ ಅಧ್ಯಕ್ಷ   

ವಿಜಯಪುರ: ಜ.26 ರಂದು ಆಚರಿಸುವ ಗಣರಾಜ್ಯೋತ್ಸವ ದಿನಾಚರಣೆಯ ಮೆರವಣಿಗೆಯಲ್ಲಿ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರದೊಂದಿಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನಿಟ್ಟು ಮೆರವಣಿಗೆ ಮಾಡುವಂತೆ ಎಲ್ಲಾ ಶಾಲಾ, ಕಾಲೇಜುಗಳಿಗೆ ನಿರ್ದೇಶನ ನೀಡಬೇಕು ಎಂದು ಮುಖ್ಯಮಂತ್ರಿಗೆ ಪತ್ರ ಬರೆದಿರುವುದಾಗಿ ಭಾರತೀಯ ಮಾನವ ಹಕ್ಕುಗಳ ಜಾಗೃತಿ ವೇದಿಕೆಯ ಹೋಬಳಿ ಘಟಕದ ಅಧ್ಯಕ್ಷ ಎಸ್. ಮಂಜುನಾಥ್ ತಿಳಿಸಿದರು.

ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸ್ವಾತಂತ್ರ್ಯ ಬಂದ ನಂತರ ಈ ದೇಶದಲ್ಲಿನ ಎಲ್ಲ ಜಾತಿ, ವರ್ಗದ ಜನರು ಶಾಂತಿ ಸಹಬಾಳ್ವೆಯಿಂದ ಬದುಕು ಕಟ್ಟಿಕೊಳ್ಳಲಿಕ್ಕೆ ಅನುಕೂಲವಾಗುವಂತೆ ಡಾ.ಬಿ.ಆರ್.ಅಂಬೇಡ್ಕರ್ ಅವರು, ಅತ್ಯುತ್ತಮ ಸಂವಿಧಾನವನ್ನು ಈ ದೇಶಕ್ಕೆ ಸಮರ್ಪಣೆ ಮಾಡಿದ್ದಾರೆ ಎಂದರು.

ಮೆರವಣಿಗೆಯಲ್ಲಿ ಅವರ ಭಾವಚಿತ್ರವನ್ನು ಬಳಕೆ ಮಾಡಬೇಕು. ಗಣತಂತ್ರ ವ್ಯವಸ್ಥೆ ಜಾರಿಗೆ ಬಂದಿರುವುದರ ಹಿಂದಿನ ಶ್ರಮವನ್ನು ಯುವಪೀಳಿಗೆಗೆ ಮನವರಿಕೆ ಮಾಡಿಸಿಕೊಡಬೇಕು ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.