ADVERTISEMENT

ಕಾನೂನು, ಸುವ್ಯವಸ್ಥೆ ಕಾಪಾಡಲು ಮನವಿ

​ಪ್ರಜಾವಾಣಿ ವಾರ್ತೆ
Published 26 ಜನವರಿ 2022, 3:10 IST
Last Updated 26 ಜನವರಿ 2022, 3:10 IST
ಚಿಂತಾಮಣಿಯಲ್ಲಿ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಬೇಕು ಎಂದು ಒತ್ತಾಯಿಸಿ ಕರವೇ ಪದಾಧಿಕಾರಿಗಳು ಮಂಗಳವಾರ ಡಿವೈಎಸ್‌ಪಿ ಎಸ್.ಟಿ. ಚಂದ್ರಶೇಖರ್ ಅವರಿಗೆ ಮನವಿ ಸಲ್ಲಿಸಿದರು
ಚಿಂತಾಮಣಿಯಲ್ಲಿ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಬೇಕು ಎಂದು ಒತ್ತಾಯಿಸಿ ಕರವೇ ಪದಾಧಿಕಾರಿಗಳು ಮಂಗಳವಾರ ಡಿವೈಎಸ್‌ಪಿ ಎಸ್.ಟಿ. ಚಂದ್ರಶೇಖರ್ ಅವರಿಗೆ ಮನವಿ ಸಲ್ಲಿಸಿದರು   

ಚಿಂತಾಮಣಿ: ನಗರದಲ್ಲಿ ಹದಗೆಟ್ಟಿರುವ ಸಂಚಾರ ವ್ಯವಸ್ಥೆ ಸರಿಪಡಿಸಲು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ಪದಾಧಿಕಾರಿಗಳು ಒತ್ತಾಯಿಸಿದರು.

ಮಂಗಳವಾರ ಡಿವೈಎಸ್‌ಪಿ ಎಸ್.ಟಿ. ಚಂದ್ರಶೇಖರ್ ಅವರನ್ನು ಭೇಟಿ ಮಾಡಿ ಈ ಬಗ್ಗೆ ಮನವಿ ಸಲ್ಲಿಸಿದರು.

ನಗರದಲ್ಲಿ ವಾಹನಗಳು ಅಡ್ಡಾ ದಿಡ್ಡಿ ಸಂಚರಿಸುವುದು, ಎಲ್ಲೆಂದರಲ್ಲಿ ನಿಲ್ಲಿಸುವುದು, ಸಂಚಾರ ನಿಯಮ ಪಾಲಿಸದೆ ಸಂಚರಿಸುವುದು ಸಾಮಾನ್ಯವಾಗಿದೆ ಎಂದು ದೂರಿದರು.

ADVERTISEMENT

ನಿಯಮಗಳನ್ನು ಉಲ್ಲಂಘಿಸಿ ವಾಹನ ಚಲಾಯಿಸುವುದರಿಂದ ಸಣ್ಣಪುಟ್ಟ ಅಪಘಾತಗಳು ನಡೆಯುತ್ತಿವೆ. ಚೇಳೂರು ರಸ್ತೆ ಮತ್ತು ಕೋಲಾರ ರಸ್ತೆಯಲ್ಲಿ ಪ್ರಾಣ ಕಳೆದುಕೊಂಡ ಪ್ರಕರಣಗಳು ನಡೆದಿದೆ. ಸಂಚಾರ ನಿಯಮ ಪಾಲಿಸಲು ಕಠಿಣ ಕ್ರಮ ಕೈಗೊಂಡು ಅಮಾಯಕರನ್ನು ತೊಂದರೆಯಿಂದ ದೂರ ಮಾಡಬೇಕು ಎಂದು ಮನವಿ ಮಾಡಿದರು.

ವೇದಿಕೆಯ ತಾಲ್ಲೂಕು ಘಟಕದ ಅಧ್ಯಕ್ಷ ಶ್ರೀರಾಮನಗರ ಶಂಕರ್, ಯೂನಸ್ ಖಾನ್, ಇನಾಯತ್ ಉಲ್ಲಾ, ಆರ್. ಈಲಿಯಾಸ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.