ADVERTISEMENT

ಸಾಮಾಜಿಕ ನ್ಯಾಯ ಪಾಲನೆಗೆ ಮೀಸಲಾತಿ ಅಗತ್ಯ: ಪಿಳ್ಳಮುನಿಶಾಮಪ್ಪ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2022, 7:02 IST
Last Updated 9 ಅಕ್ಟೋಬರ್ 2022, 7:02 IST

ದೇವನಹಳ್ಳಿ: ‘ಪರಿಶಿಷ್ಟ ಜಾತಿ ಮತ್ತು ಪಂಗಡದ ಮೀಸಲಾತಿ ಹೆಚ್ಚಳಕ್ಕೆ ರಾಜ್ಯ ಸರ್ಕಾರ ತೆಗೆದುಕೊಂಡಿರುವ ನಿರ್ಧಾರ ಸ್ವಾಗತಾರ್ಹವಾಗಿದೆ’ ಎಂದು ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ಈ ಮಹತ್ವದ ತೀರ್ಮಾನದಿಂದ ಮುಂದಿನ ದಿನಗಳಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಸಾಮಾಜಿಕ ನ್ಯಾಯ ಸಿಗಲಿದೆ ಎಂದು ತಿಳಿಸಿದರು.

ಮುಂದಿನ ಅಧಿವೇಶನದಲ್ಲಿ ಯಾವ ಸಮುದಾಯಕ್ಕೆ ಯಾವ ಅವಕಾಶಗಳು ಸಿಗಲಿವೆ ಎನ್ನುವುದು ನಿಖರವಾಗಿ ತಿಳಿಯಲಿದೆ. ಪರಿಶಿಷ್ಟ ಜಾತಿಗೆ ಶೇ 17 ಮತ್ತು ಪರಿಶಿಷ್ಟ ಪಂಗಡಕ್ಕೆ ಶೇ 7ರಷ್ಟು ಮೀಸಲಾತಿ ನಿಗದಿಪಡಿಸಲಾಗಿದೆ. ಮೀಸಲಾತಿ ಹೆಚ್ಚಳದಿಂದ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಹಾಗೂ ರಾಜಕೀಯವಾಗಿ ಎರಡು ವರ್ಗಗಳು ಅಭಿವೃದ್ಧಿ ಹೊಂದಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.

ADVERTISEMENT

ಬೈಯಪ್ಪ ಮಾಜಿ ಅಧ್ಯಕ್ಷ ಎಸ್‌.ಎಲ್‌.ಎನ್‌. ಅಶ್ವಥ್‌ ನಾರಾಯಣ್‌ ಮಾತನಾಡಿ, ‘ಬಿಜೆಪಿ ಸರ್ಕಾರ ಎಸ್‌.ಸಿ ಮತ್ತು ಎಸ್‌.ಟಿ ಸಮುದಾಯದ ಅಭಿವೃದ್ಧಿಗೆ ಒತ್ತು ನೀಡಿದೆ’ ಎಂದು ತಿಳಿಸಿದರು.

ಬಿಜೆಪಿ ಮಂಡಲ ಅಧ್ಯಕ್ಷ ಸುಂದರೇಶ್, ಎಸ್‌.ಟಿ ಮೋರ್ಚಾ ಜಿಲ್ಲಾ ಅಧ್ಯಕ್ಷ ಮುರಳಿ, ಪುರಸಭೆ ಮಾಜಿ ಸದಸ್ಯ ಉಮೇಶ್, ಮುಖಂಡರಾದ ಅಂಬರೀಶ್, ವಿಜಯ್‌ ಕುಮಾರ್, ಟೌನ್‌ ಅಧ್ಯಕ್ಷ ಸಂದೀಪ್‌ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.