ADVERTISEMENT

ಜನರ ಸಂಕಷ್ಟಕ್ಕೆ ಸ್ಪಂದಿಸಿ: ಶಾಸಕ ಬಿ. ಶಿವಣ್ಣ

​ಪ್ರಜಾವಾಣಿ ವಾರ್ತೆ
Published 3 ಜೂನ್ 2021, 4:18 IST
Last Updated 3 ಜೂನ್ 2021, 4:18 IST
ಆನೇಕಲ್ ತಾಲ್ಲೂಕಿನ ಮರಸೂರು ಗ್ರಾಮದಲ್ಲಿ ಆಹಾರದ ಕಿಟ್‌ ವಿತರಿಸಿದ ಶಾಸಕ ಬಿ. ಶಿವಣ್ಣ
ಆನೇಕಲ್ ತಾಲ್ಲೂಕಿನ ಮರಸೂರು ಗ್ರಾಮದಲ್ಲಿ ಆಹಾರದ ಕಿಟ್‌ ವಿತರಿಸಿದ ಶಾಸಕ ಬಿ. ಶಿವಣ್ಣ   

ಆನೇಕಲ್:ಕೊರೊನಾ ಸಂಕಷ್ಟದ ಸಮಯದಲ್ಲಿ ಜನಪ್ರತಿನಿಧಿಗಳು ತಮ್ಮ ವ್ಯಾಪ್ತಿಯಲ್ಲಿ ಸಂಕಷ್ಟದಲ್ಲಿ ಇರುವವರಿಗೆ ನೆರವಾಗುವ ಮೂಲಕ ಸ್ಪಂದಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಶಾಸಕ ಬಿ. ಶಿವಣ್ಣ ತಿಳಿಸಿದರು.

ಅವರು ತಾಲ್ಲೂಕಿನ ಮರಸೂರು ಗ್ರಾಮದಲ್ಲಿ ಆಹಾರದ ಕಿಟ್‌ ವಿತರಿಸಿ ಮಾತನಾಡಿದರು.

ಮರಸೂರು ಗ್ರಾಮ ಪಂಚಾಯಿತಿ ಸದಸ್ಯೆ ನಿರ್ಮಲಾ ಆನಂದ್‌ ಮತ್ತು ಮಂಜುನಾಥರೆಡ್ಡಿ ಅವರು ತಮ್ಮ ವ್ಯಾಪ್ತಿ ಅವಶ್ಯಕತೆ ಇರುವವರನ್ನು ಗುರುತಿಸಿ ಅವರಿಗೆ ಆಹಾರದ ಕಿಟ್‌ ನೀಡಿರುವುದು ಉಪಯುಕ್ತವಾಗಿದೆ. ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಹಲವಾರು ಕಾರ್ಮಿಕರು, ಬಡವರು ಸಂಕಷ್ಟದಲ್ಲಿದ್ದಾರೆ. ಆಹಾರದ ಕಿಟ್‌ಗಳನ್ನು ನೀಡಿರುವುದರಿಂದ ನೆರವಾಗಿದೆ ಎಂದು
ಹೇಳಿದರು.

ADVERTISEMENT

ಮರಸೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪುರುಷೋತ್ತಮ ರೆಡ್ಡಿ ಮಾತನಾಡಿ, ಕಳೆದ ವರ್ಷ ಲಾಕ್‌ಡೌನ್‌ ಸಂದರ್ಭದಲ್ಲಿ ಮರಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು ಎರಡು ಸಾವಿರ ಕಿಟ್‌ಗಳನ್ನು ವಿತರಿಸಲಾಗಿತ್ತು. ಈ ವರ್ಷ ಎಲ್ಲಾ ಸದಸ್ಯರು ತಮ್ಮ ವ್ಯಾಪ್ತಿಯಲ್ಲಿ ಆಹಾರದ ಕಿಟ್‌ಗಳನ್ನು ವಿತರಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದರು.

ಸೋಂಕು ತಡೆಯಲು ಗ್ರಾಮಸ್ಥರು ಮನೆಯಿಂದ ಹೊರಬಾರದು. ಹಾಗಾಗಿ ಮನೆಯಲ್ಲಿಯೇ ಉಳಿದ ಗಾರ್ಮೆಂಟ್ಸ್‌ ಉದ್ಯೋಗಿಗಳು, ರೇಷನ್‌ ಕಾರ್ಡ್‌ ಇಲ್ಲದವರು ತೊಂದರೆಗೆ ಸಿಲುಕಿದ್ದಾರೆ ಎಂದು ಹೇಳಿದರು.

ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರಭಾಕರ ರೆಡ್ಡಿ, ಮಂಜುನಾಥ ರೆಡ್ಡಿ, ನಿರ್ಮಲಾ ಆನಂದ್‌, ಮುಖಂಡರಾದ ಚಂದ್ರಾರೆಡ್ಡಿ, ಶಿವರಾಮರೆಡ್ಡಿ, ಶ್ರೀನಿವಾಸ್‌, ಎಸ್‌.ಟಿ.ಡಿ. ರಮೇಶ್, ಕೃಷ್ಣಪ್ಪ, ಮಡಿವಾಳ ಶಿವಣ್ಣ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.