ADVERTISEMENT

ರಸ್ತೆ ಅಪಘಾತ: ಬೈಕ್‌ ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 16 ಜನವರಿ 2020, 13:01 IST
Last Updated 16 ಜನವರಿ 2020, 13:01 IST
ಶಶಿಕುಮಾರ್‌
ಶಶಿಕುಮಾರ್‌   

ಸಾತನೂರು (ಕನಕಪುರ): ಸಂಕ್ರಾಂತಿ ಹಬ್ಬಕ್ಕೆ ಸಾಮಗ್ರಿ ತರಲು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಬೈಕ್‌ ಸವಾರ ಸಾವನಪ್ಪಿರುವುದು ಸಾತನೂರು ಗ್ರಾಮದಲ್ಲಿ ಬುಧವಾರ ನಡೆದಿದೆ.

ಸಾತನೂರು ಹೋಬಳಿ ಬೋರೇಗೌಡನದೊಡ್ಡಿ ಗ್ರಾಮದ ಶಶಿಕುಮಾರ್‌ (26) ಮೃತಪಟ್ಟವರು.

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಶಶಿಕುಮಾರ್‌ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ. ಅವರ ಜತೆಯಲ್ಲಿದ್ದ ಸಹೋದರ ಶಿವರಾಜು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಮೃತರ ಮತ್ತೊಬ್ಬ ಸಹೋದರ ಲಿಂಗರಾಜು ಸಾತನೂರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ಎಸ್‌.ಐ. ಮುರಳಿ ಕನಕಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.