ತೂಬಗೆರೆ(ದೊಡ್ಡಬಳ್ಳಾಪುರ): ತಾಲ್ಲೂಕಿನ ತೂಬಗೆರೆ–ಮೆಳೇಕೋಟೆ ರಸ್ತೆಯ ಕಾಚಹಳ್ಳಿ ಸಮೀಪ ರಸ್ತೆಯ ಗುಂಡಿ ಹಾಗೂ ಕೆರೆಯ ಕಟ್ಟೆ ಬಳಿ ಶನಿವಾರ ಆಟೊ ಮತ್ತು ಕಾರಿನ ನಡುವೆ ನಡೆದ ಮುಖಾಮುಖಿ ಡಿಕ್ಕಿಯಾಗಿ ಆಟೊದಲ್ಲಿ ಇದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಎಳನೀರು ತರಲು ಆಟೋದಲ್ಲಿ ತೆರಳುತ್ತಿದ್ದ ವೇಳೆ ಅಪಘಾತ ನಡೆದಿದೆ. ತೂಬಗೆರೆಯ ಮಧು(20), ಅರ್ಜುನ್(13) ಹಾಗೂ ಯಶವಂತ್(13) ಎಂದು ಗಾಯಗೊಂಡವರು. ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದವರಿಗೂ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿದೆ.
ರಸ್ತೆ ಹಾಳಾಗಿರುವ ಬಗ್ಗೆ ಹಲವಾರು ಬಾರಿ ಅಧಿಕಾರಿಗಳ ಗಮನಕ್ಕೆ ತಂದಿದ್ದರು ದುರಸ್ತಿ ಕಾರ್ಯ ಕೈಗೊಳ್ಳದಿರುವುದರಿಂದ ಅಪಘಾತಗಳು ನಡೆಯುತ್ತಲೇ ಇವೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.