ಆನೇಕಲ್: ತಾಲ್ಲೂಕಿನ ಎಲೆಕ್ಟ್ರಾನಿಕ್‌ಸಿಟಿಯ ಫ್ಲೈಓವರ್ ಮೇಲೆ ಗುರುವಾರ ಸರಣಿ ಅಪಘಾತ ಸಂಭವಿಸಿದ್ದು, ಅಪಘಾತದಿಂದಾಗಿ 10ಕ್ಕೂ ಹೆಚ್ಚು ಕಾರುಗಳು ಜಖಂಗೊಂಡಿದ್ದು ಎರಡು ಕಿ.ಮೀ.ಗೂ ಹೆಚ್ಚು ದೂರ ವಾಹನ ದಟ್ಟಣೆ ಉಂಟಾಗಿತ್ತು.
ಎಲೆಕ್ಟ್ರಾನಿಕ್‌ಸಿಟಿಯ ಎಲಿವೇಟೆಡ್ ಫ್ಲೈಓವರ್‌ನಲ್ಲಿ ಗುರುವಾರ ನಡೆದ ಸರಣಿ ಅಪಘಾತದಿಂದಾಗಿ ಎರಡು ಮೂರು ಗಂಟೆಗಳಿಗೂ ಹೆಚ್ಚು ಕಾಲ ರಸ್ತೆ ದಟ್ಟಣೆ ಉಂಟಾಗಿತ್ತು. ಅತಿವೇಗವಾಗಿ ಹೋಗುತ್ತಿದ್ದ ಕಾರೊಂದು ಏಕಾಏಕಿ ಬ್ರೇಕ್ ಹಾಕಿದ್ದರಿಂದ ಸರಣಿ ಅಪಘಾತಗಳು ಸಂಭವಿಸಿದೆ ಎಂದು ಪ್ರತ್ಯದರ್ಶಿಗಳು ತಿಳಿಸಿದ್ದಾರೆ.
ಅಪಘಾತದಿಂದಾಗಿ ಯಾವುದೇ ತೊಂದರೆಯಾಗಿಲ್ಲ ಆದರೆ 10ಕ್ಕೂ ಹೆಚ್ಚು ಕಾರುಗಳು ಜಖಂಗೊಂಡಿವೆ. ಎರಡು ಕಿ.ಮೀ.ಗೂ ಹೆಚ್ಚು ದೂರ ರಸ್ತೆ ದಟ್ಟಣೆ ಉಂಟಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.