
ಆನೇಕಲ್: ತಾಲ್ಲೂಕಿನ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೇಗಿಹಳ್ಳಿ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಂ.ಕೃಷ್ಣಪ್ಪ ಅವರು ಭೂಮಿ ಪೂಜೆ ನೆರವೇರಿಸಿದರು. ತಾಲ್ಲೂಕಿನ ಬೇಗಿಹಳ್ಳಿ, ಮೆಳೆನಲ್ಲಸಂದ್ರ-ರಾಮಸಂದ್ರ, ಕೊಪ್ಪ ಮುಖ್ಯ ರಸ್ತೆ ಅಭಿವೃದ್ಧಿ ನಡೆಯಲಿದೆ.
ಶಾಸಕ ಎಂ.ಕೃಷ್ಣಪ್ಪ ಮಾತನಾಡಿ, ಸಂಪರ್ಕ ರಸ್ತೆಗಳನ್ನು ಅಭಿವೃದ್ಧಿಯಿಂದ ಸ್ಥಳೀಯ ಗ್ರಾಮಗಳ ಪ್ರತಿನಿತ್ಯದ ಓಡಾಟಕ್ಕೆ ಯಾವುದೇ ತೊಂದರೆಗಳಾಗುವುದಿಲ್ಲ ಎಂದರು.
ಇತ್ತೀಚಿನ ದಿನಗಳಲ್ಲಿ ಜಿಗಣಿ-ಬನ್ನೇರುಘಟ್ಟ ಮಾರ್ಗವಾಗಿ ಬೆಂಗಳೂರಿಗೆ ತೆರಳುವವರ ಸಂಖ್ಯೆ ಹೆಚ್ಚಾಗುತ್ತಿದೆ. ರಸ್ತೆ ದಟ್ಟಣೆ ಸಮಸ್ಯೆಯ ಪರಿಹಾರಕ್ಕೆ ಸಂಚಾರ ಪೊಲೀಸ್ ಠಾಣೆಯ ಅವಶ್ಯಕ ಇದೆ. ಗೃಹ ಸಚಿವರನ್ನು ಭೇಟಿ ಮಾಡಿ ಈ ಬಗ್ಗೆ ಮನವಿ ಸಲ್ಲಿಸಲಾಗುವುದು. ಇದರಿಂದಾಗಿ ಈ ಭಾಗದ ಸಂಚಾರ ದಟ್ಟಣೆ ಸಮಸ್ಯೆಯನ್ನು ಪರಿಹರಿಸಲು ಉಪಯುಕ್ತವಾಗುತ್ತದೆ ಎಂದು ತಿಳಿಸಿದರು.
ಮುಖಂಡರಾದ ಯಾರಂಡಹಳ್ಳಿ ಹರೀಶ್ ರೆಡ್ಡಿ, ಕೊಪ್ಪ ಮುನಿರಾಜು, ಶಶಿಕುಮಾರ್, ಯತಿರಾಜ್, ಸುಜಾತ, ರಘುರಾಮ್, ಚೌಡಪ್ಪ, ಅಶ್ವಥಪ್ಪ, ಮಂಜುನಾಥ್, ನಾಗೇಂದ್ರ, ರಮೇಶ್, ಕೇಶವ, ರವಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.