ವಿಜಯಪುರ(ದೇವನಹಳ್ಳಿ): ವಿಜಯಪುರ–ಕೋಲಾರ ರಸ್ತೆಯಲ್ಲಿ ವಾಹನ ಸವಾರರ ಸುರಕ್ಷತೆಗಾಗಿ ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದೆ ರಸ್ತೆ ಕಾಮಗಾರಿ ನಡೆಸುತ್ತಿರುವುದು ಅಪಾಯಕ್ಕೆ ಆಹ್ವಾನ ನೀಡುತ್ತಿದೆ ಎಂದು ವಾಹನ ಸವಾರರು ದೂರಿದ್ದಾರೆ.
ಕೋಲಾರ–ವಿಜಯಪುರ, ಚಿಕ್ಕಬಳ್ಳಾಪುರದ ಕಡೆಗೆ ಸಂಚರಿಸುವ ವಾಹನಗಳ ಸಂಚಾರಕ್ಕಾಗಿ ತಾತ್ಕಾಲಿಕವಾಗಿ ಪಕ್ಕದಲ್ಲಿ ಮಣ್ಣಿನ ರಸ್ತೆ ನಿರ್ಮಿಸಿದ್ದಾರೆ. ವಾಹನಗಳು ಸಂಚರಿಸುವ ಕಡೆಯಲ್ಲಿ ಸುರಕ್ಷತಾ ಕ್ರಮ ಕೈಗೊಂಡಿಲ್ಲ. ರಸ್ತೆ ಕಾಮಗಾರಿ ನಡೆಯುತ್ತಿದೆ ಎಂದೂ ಎಚ್ಚರಿಕೆ ಫಲಕ ಅಳವಡಿಸಿಲ್ಲ. ಕನಿಷ್ಠ ಬ್ಯಾರಿಕೇಡ್ ಅನ್ನು ಅಳವಡಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಸ್ತೆ ಸಂಪೂರ್ಣವಾಗಿ ಧೂಳುಮಯವಾಗಿದ್ದು, ರಸ್ತೆಯಲ್ಲಿ ವಾಹನ ಸವಾರರು ಸ್ವಲ್ಪ ಎಚ್ಚರ ತಪ್ಪಿದರೂ ವಾಹನ ಹಳ್ಳದೊಳಗೆ ಉರುಳಿ ಬೀಳುತ್ತವೆ. ಅಪಘಾತ ಸಂಭವಿಸುವ ಮುನ್ನ ಗುತ್ತಿಗೆದಾರರು, ಇಲ್ಲಿ ಸುರಕ್ಷತಾ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.