ADVERTISEMENT

ದೇವನಹಳ್ಳಿ: ₹7.86 ಕೋಟಿ ಮೌಲ್ಯದ ಅಕ್ರಮ ಮದ್ಯ ವಶ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2024, 14:21 IST
Last Updated 22 ಮಾರ್ಚ್ 2024, 14:21 IST
ಅಕ್ರಮ ಮದ್ಯವನ್ನು ವಶಕ್ಕೆ ಪಡೆದಿರುವ ಅಬಕಾರಿ ಇಲಾಖೆ ತಂಡ
ಅಕ್ರಮ ಮದ್ಯವನ್ನು ವಶಕ್ಕೆ ಪಡೆದಿರುವ ಅಬಕಾರಿ ಇಲಾಖೆ ತಂಡ   

ದೇವನಹಳ್ಳಿ: ನೀತಿ ಸಂಹಿತಿ ಜಾರಿಯಾದ ಐದು ದಿನಗಳಲ್ಲಿ ಅಬಕಾರಿ ಇಲಾಖೆಯ ಕಾರ್ಯಾಚರಣೆಯಿಂದ ₹7.86 ಕೋಟಿ ಮೌಲ್ಯದ ಅಕ್ರಮ ಮದ್ಯವನ್ನು ವಶಕ್ಕೆ ಪಡೆದಿದೆ.

ಜಿಲ್ಲೆಯ ನೆಲಮಂಗಲದಲ್ಲಿರುವ ಡಿಸ್ಟಿಲರಿ ಕಾರ್ಖಾನೆಗಳಲ್ಲಿ ದಾಖಲೆ ರಹಿತ ಮದ್ಯವನ್ನು ವಶಕ್ಕೆ ಪಡೆಯಲಾಗಿದ್ದು, ದೇವನಹಳ್ಳಿ ಸೇರಿದಂತೆ ಜಿಲ್ಲೆಯಾದ್ಯಂತ ಒಟ್ಟು 1,48,985 ಲಕ್ಷ ಲೀಟರ್ ಮದ್ಯ ಈ ವರೆಗೂ ವಶಕ್ಕೆ ಪಡೆದುಕೊಳ್ಳಲಾಗಿದೆ.

ಅಬಕಾರಿ ಇಲಾಖೆಯೂ ಒಟ್ಟು 45 ಪ್ರಕರಣ ದಾಖಲು ಮಾಡಿದ್ದು, ಎರಡು ಲಾರಿ, ಎರಡು ಕಾರು, ಬೈಕ್ ಸೇರಿದಂತೆ ಒಟ್ಟು ಒಂಬತ್ತು ವಾಹನವನ್ನು ಜಪ್ತಿ ಮಾಡಿದೆ.

ADVERTISEMENT

ಅಬಕಾರಿ ಜಿಲ್ಲಾಧಿಕಾರಿ ನಾಗೇಶ್‌ ನೇತೃತ್ವದ ತಂಡ ನೆಲಮಂಗಲ ವ್ಯಾಪ್ತಿಯಲ್ಲಿ 2 ಪ್ರತ್ಯೇಕ ಪ್ರಕರಣದಲ್ಲಿ 10 ಕೆ.ಜಿ ಗಾಂಜಾವನ್ನು ವಶಕ್ಕೆ ಪಡೆದಿದೆ. ಈ ಸಂಬಂಧ ಅಸ್ಸಾಂ ಮೂಲದ ಬಿರಾ ಗಾಂಡಾ ಹಾಗೂ ಸೋಮನಾಥ ಗೊಂಡ ಎಂಬ ಆರೋಪಿಗಳನ್ನು ಬಂಧಿಸಿ, ಎನ್‌ಡಿಪಿಎಸ್‌ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ನೆಲಮಂಗಳದಲ್ಲಿ ಗಾಂಜಾ ಸಾಗಣೆ ಮಾಡುತ್ತಿದ್ದ ಆರೋಪಿಗಳನ್ನು ಮಾಲು ಸಹಿತ ಬಂಧಿಸಿದ ಅಬಕಾರಿ ಅಧಿಕಾರಿಗಳು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.