ADVERTISEMENT

ಎಸ್‌. ಮಾರ್ಟಿನ್‌ ನಿಧನ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2022, 5:08 IST
Last Updated 7 ಡಿಸೆಂಬರ್ 2022, 5:08 IST
ಎಸ್. ಮಾರ್ಟಿನ್
ಎಸ್. ಮಾರ್ಟಿನ್   

ಆನೇಕಲ್: ಪಟ್ಟಣದ ಎಎಸ್‌ಬಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಎಸ್‌. ಮಾರ್ಟಿನ್‌ (58) ಹೃದಯಾಘಾತದಿಂದ ಸೋಮವಾರ ನಿಧನರಾಗಿದ್ದಾರೆ.

ಮೃತರಿಗೆ ಪತ್ನಿ ಮತ್ತು ಪುತ್ರಿ ಇದ್ದಾರೆ.

ಆನೇಕಲ್‌ ಎಎಸ್‌ಬಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾಗಿ ಕಳೆದ ಎರಡು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದ ಅವರು ಸರ್ಕಾರಿ ಕಾಲೇಜಿನ ಸಮಗ್ರ ಅಭಿವೃದ್ಧಿಗೆ ಕೊಡುಗೆ ನೀಡಿದ್ದಾರೆ.

ADVERTISEMENT

ಹಳೆಯ ವಿದ್ಯಾರ್ಥಿಗಳು ಮತ್ತು ದಾನಿಗಳ ಸಹಕಾರ ಪಡೆದು ಕಾಲೇಜಿಗೆ ಮೂಲ ಸೌಲಭ್ಯ ಕಲ್ಪಿಸಲು ಶ್ರಮಿಸಿದ್ದರು. ಕಾಲೇಜಿನಲ್ಲಿ ಕಳೆದ ಐದಾರು ವರ್ಷಗಳಿಂದ ವಿದ್ಯಾರ್ಥಿಗಳ ಸಂಖ್ಯೆ 200 ದಾಟಿರಲಿಲ್ಲ. ಆದರೆ, ಅವರ ಕಾಳಜಿಯಿಂದ ದಾಖಲಾತಿ ಸಂಖ್ಯೆ 500ಕ್ಕೆ ತಲುಪಿತ್ತು. ಕಂಪ್ಯೂಟರ್‌ ವಿಭಾಗವನ್ನು ಸ್ಥಾಪಿಸುವಲ್ಲಿ ಶ್ರಮಿಸಿದ್ದರು.

ಮೃತರ ಅಂತ್ಯಕ್ರಿಯೆಯು ಸಂಜೆ ಬೆಂಗಳೂರಿನಲ್ಲಿ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.