ADVERTISEMENT

ಸಾಧನಾ ಸಮಾವೇಶ: ವೇದಿಕೆ ನಿರ್ಮಾಣಕ್ಕೆ ಭೂಮಿಪೂಜೆ

​ಪ್ರಜಾವಾಣಿ ವಾರ್ತೆ
Published 22 ಜುಲೈ 2022, 5:34 IST
Last Updated 22 ಜುಲೈ 2022, 5:34 IST
ದೊಡ್ಡಬಳ್ಳಾಪುರ ತಾಲ್ಲೂಕಿನ ರಘುನಾಥಪುರ ಸಮೀಪ ಬಿಜೆಪಿ ಸಾಧನಾ ಸಮಾವೇಶ ನಡೆಯುವ ಮುಖ್ಯ ವೇದಿಕೆ ನಿರ್ಮಾಣಕ್ಕೆ ಗುರುವಾರ ಭೂಮಿಪೂಜೆ ನಡೆಯಿತು
ದೊಡ್ಡಬಳ್ಳಾಪುರ ತಾಲ್ಲೂಕಿನ ರಘುನಾಥಪುರ ಸಮೀಪ ಬಿಜೆಪಿ ಸಾಧನಾ ಸಮಾವೇಶ ನಡೆಯುವ ಮುಖ್ಯ ವೇದಿಕೆ ನಿರ್ಮಾಣಕ್ಕೆ ಗುರುವಾರ ಭೂಮಿಪೂಜೆ ನಡೆಯಿತು   

ದೊಡ್ಡಬಳ್ಳಾಪುರ:ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಜುಲೈ 28ರಂದು ಬಿಜೆಪಿ ಸಾಧನಾ ಸಮಾವೇಶವನ್ನು ತಾಲ್ಲೂಕಿನ ರಘುನಾಥಪುರ ಸಮೀಪ ಆಯೋಜಿಸಲಾಗಿದೆ. ಇದರ ಅಂಗವಾಗಿ ಗುರುವಾರ ಬಿಜೆಪಿ ಮುಖಂಡರು ಕಾರ್ಯಕ್ರಮ ನಡೆಯುವ ಮುಖ್ಯ ವೇದಿಕೆಗೆ ಭೂಮಿಪೂಜೆ ನೆರವೇರಿಸಿದರು.

ಇತ್ತೀಚೆಗೆ ಸಂಘ ಪರಿವಾರ ಮತ್ತು ಬಿಜೆಪಿ ನಾಯಕರ ಜಂಟಿ ಚಿಂತನಾ ಶಿಬಿರದಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಸಮಾವೇಶದಲ್ಲಿ ಸುಮಾರು 1 ಲಕ್ಷ ಕಾರ್ಯಕರ್ತರನ್ನು ಸೇರಿಸುವ ಗುರಿ ಹೊಂದಲಾಗಿದೆ. ಈ ಮೂಲಕ ಬಿಜೆಪಿ ಸಮಾವೇಶದಲ್ಲಿ‌ ಸರ್ಕಾರದ ಒಂದು ವರ್ಷದ ಸಾಧನೆ ತಿಳಿಸುವ ಪ್ರಯತ್ನ ಇದಾಗಿದೆ.

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಎಸ್‌. ಸುಧಾರಾಣಿ ಲಕ್ಷ್ಮಿನಾರಾಯಣ್‌, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ನಾರಾಯಣಸ್ವಾಮಿ, ಮುಖಂಡರಾದ ಗೋಪಿ, ಪುಷ್ಪಾ ಶಿವಶಂಕರ್‌, ಟಿ.ವಿ. ಲಕ್ಷ್ಮಿನಾರಾಯಣ್‌, ಕೆ.ಬಿ. ಮುದ್ದಪ್ಪ, ಶಿವಾನಂದರೆಡ್ಡಿ, ಧೀರಜ್‌ ಮುನಿರಾಜು, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ನಾಗರಾಜ್‌, ನಗರ ಘಟಕದ ಅಧ್ಯಕ್ಷ ಎಚ್‌.ಎಸ್‌. ಶಿವಶಂಕರ್‌ ಹಾಜರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.