ADVERTISEMENT

ಮಹಿಳೆಯರ ಸುರಕ್ಷತೆಗೆ ಕ್ರಮಕ್ಕೆ ಮನವಿ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2018, 13:41 IST
Last Updated 10 ಡಿಸೆಂಬರ್ 2018, 13:41 IST
ಮಹಿಳಾ ಒಕ್ಕೂಟದ ವತಿಯಿಂದ ಜಿಲ್ಲಾಧಿಕಾರಿ ಕರೀಗೌಡ ಅವರಿಗೆ ಮನವಿ ಸಲ್ಲಿಸಲಾಯಿತು  
ಮಹಿಳಾ ಒಕ್ಕೂಟದ ವತಿಯಿಂದ ಜಿಲ್ಲಾಧಿಕಾರಿ ಕರೀಗೌಡ ಅವರಿಗೆ ಮನವಿ ಸಲ್ಲಿಸಲಾಯಿತು     

ದೊಡ್ಡಬಳ್ಳಾಪುರ: ಮಹಿಳೆಯರು ಹಾಗೂ ವಿದ್ಯಾರ್ಥಿನಿಯರಿಗೆ ಸುರಕ್ಷಿತೆ ಇಲ್ಲದಾಗಿದೆ. ಈ ಕುರಿತಂತೆ ಡಿ.14 ರಂದು ನಗರದಲ್ಲಿ ಮಹಿಳಾ ಮತ್ತು ಮಕ್ಕಳ ಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಜಾಥಾ ನಡೆಸಿ ಮನವಿ ಸಲ್ಲಿಸಲಾಗುವುದು. ಈ ಮನವಿ ಪತ್ರವನ್ನು ಖುದ್ದಾಗಿ ಜಿಲ್ಲಾಧಿಕಾರಿಗಳೇ ಬಂದು ಸ್ವೀಕರಿಸಬೇಕು ಎಂದು ಒಕ್ಕೂಟದ ವತಿಯಿಂದ ಸೋಮವಾರ ಜಿಲ್ಲಾಧಿಕಾರಿ ಕರೀಗೌಡ ಅವರಿಗೆ ಮನವಿ ಸಲ್ಲಿಸಲಾಯಿತು.

ತಾಲ್ಲೂಕಿನಲ್ಲಿ ಇತ್ತೀಚೆಗೆ ಹೆಣ್ಣು ಮಕ್ಕಳು ಕಾಣೆಯಾಗುತ್ತಿರುವ ಹಾಗೂ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇದಲ್ಲದೆ ಪ್ರೀತಿಸಲು ನಿರಾಕರಿಸಿದ 10ನೇ ತರಗತಿಯ ವಿದ್ಯಾರ್ಥಿನಿ ಶಾಲೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ದಾರಿಯಲ್ಲಿಯೇ ಅಡ್ಡಗಟ್ಟಿ ಕೊಚ್ಚಿ ಕೊಲೆ ಮಾಡಲಾಗಿದೆ. ಈ ಎಲ್ಲ ಪ್ರಕರಣಗಳಿಂದ ಮಹಿಳೆಯರು ಹಾಗೂ ಹೆಣ್ಣು ಮಕ್ಕಳಲ್ಲಿ ಅಸುರಕ್ಷಿತೆಯ ಭಾವನೆ ಮೂಡಿದೆ. ಈ ಕುರಿತಂತೆ ನಡೆಯುತ್ತಿರುವ ಜಾಥಾ ಸಂದರ್ಭದಲ್ಲಿ ಹಾಜರಿದ್ದು ಮನವಿ ಪತ್ರವನ್ನು ಸ್ವೀಕರಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಹಿಳಾ ಒಕ್ಕೂಟದ ಪರವಾಗಿ ಮನವಿ ಸಲ್ಲಿಸಲಾಯಿತು.

ಅಮಲಿ ನಾಯಕ್, ಕೆ.ಎಸ್.ಪ್ರಭಾ,ಎನ್.ಸಿ.ಲಕ್ಷ್ಮೀ, ಪ್ರಮಿಳಾಮಹಾದೇವ್, ಎಂ.ಕೆ.ವತ್ಸಲಾ, ಎಲ್.ಸಿ.ದೇವಕಿ, ನಾಗಲಕ್ಷ್ಮೀ, ಚಿದಾನಂದ್, ಬಸವರಾಜು,ವಿಮಲಮ್ಮ, ತಿಮ್ಮಕ್ಕ, ಮುನೇಗೌಡ, ಗೌರಮ್ಮ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.