ADVERTISEMENT

ಶ್ರೀಗಂಧದ ಮರ ಕಳವು

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2022, 11:46 IST
Last Updated 2 ಆಗಸ್ಟ್ 2022, 11:46 IST
ಮಾಗಡಿ ತಾಲ್ಲೂಕಿನ ಯಲ್ಲಾಪುರದ ರೈತ ಜಯರಾಮೇಗೌಡ ಬೆಳೆಸಿದ್ದ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿಕೊಂಡೊಯ್ದಿದ್ದಾರೆ.
ಮಾಗಡಿ ತಾಲ್ಲೂಕಿನ ಯಲ್ಲಾಪುರದ ರೈತ ಜಯರಾಮೇಗೌಡ ಬೆಳೆಸಿದ್ದ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿಕೊಂಡೊಯ್ದಿದ್ದಾರೆ.   

ಮಾಗಡಿ: ತಾಲ್ಲೂಕಿನ ತಿಪ್ಪಸಂದ್ರ ಹೋಬಳಿಯ ಯಲ್ಲಾಪುರ ಗ್ರಾಮದ ರೈತ ಜಯರಾಮೇಗೌಡ ಅವರ ತೋಟದಲ್ಲಿ ಬೆಳೆಸಿದ್ದ 10 ಶ್ರೀಗಂಧದ ಮರಗಳನ್ನು ರಾತ್ರೋರಾತ್ರಿ ಕಳ್ಳರು ಕತ್ತರಿಕೊಂಡೊಯ್ದಿದ್ದಾರೆ.

ಕಳೆದ 10 ವರ್ಷಗಳಿಂದ ಬೆಳೆಸಿದ್ದ ಶ್ರೀಗಂಧದ ಮರಗಳನ್ನು ಕಳವು ಮಾಡಿರುವ ಬಗ್ಗೆ ಕುದೂರು ಪೊಲೀಸರಿಗೆ ದೂರು ನೀಡಿರುವುದಾಗಿ ಬೆಳೆಗಾರರು ತಿಳಿಸಿದ್ದಾರೆ. ಶ್ರೀಗಂಧದ ಮರಗಳನ್ನು ಬೆಳೆಸುವವರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಖಾಜಿಪಾಳ್ಯದ ಶ್ರೀಗಂಧದ ಮರಗಳನ್ನು ಬೆಳೆಸಿರುವ ಭೈರಪ್ಪ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT