ದೇವನಹಳ್ಳಿ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ಇಲಾಖಾ ವೆಬ್‌ಸೈಟ್ www.twd.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದು. ಸಲ್ಲಿಸಿದ ಅರ್ಜಿಯನ್ನು ಕಡ್ಡಾಯವಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು, ಕೊಠಡಿ ಸಂಖ್ಯೆ: 205, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು ಈ ಕಚೇರಿಗೆ ಅಗತ್ಯ ದಾಖಲಾತಿಗಳೊಂದಿಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗೆ: 080-29787448 ಸಂಪರ್ಕಿಸಬಹುದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.