ADVERTISEMENT

ದೇವನಹಳ್ಳಿ: ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2025, 2:19 IST
Last Updated 4 ನವೆಂಬರ್ 2025, 2:19 IST
   

ದೇವನಹಳ್ಳಿ: ಪ್ರಸಕ್ತ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪಿಯುಸಿ ಹೊರತುಪಡಿಸಿ ಉಳಿದ ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ 1ರ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳು https://ssp.postmatric.karnataka.gov.in/ ವೆಬ್‌ಸೈಟ್ ಮೂಲಕ ನವೆಂಬರ್ 15ರೊಳಗೆ ಅರ್ಜಿ ಸಲ್ಲಿಸಬೇಕು.

ವಿದ್ಯಾರ್ಥಿ ವೇತನಕ್ಕೆ ಸಂಬಂಧಿ ಸರ್ಕಾರಿ ಆದೇಶಕ್ಕಾಗಿ https://bcwd.karnataka.gov.in ವೆಬ್‌ಸೈಟ್ ನೋಡಬಹುದು. ರಾಜ್ಯ ವಿದ್ಯಾರ್ಥಿವೇತನದ ಸಹಾಯವಾಣಿ 1902 ಅಥವಾ ಇ-ಮೇಲ್ postmatric@karnataka.gov.in ಸಂಪರ್ಕಿಸಬಹುದು.

ADVERTISEMENT

ಹೆಚ್ಚಿನ ಮಾಹಿತಿಗೆ: 8050770005 ಅಥವಾ ಇ-ಮೇಲ್ bcwdhelpline@gmail.com ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.