ADVERTISEMENT

ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಲಿ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2020, 14:34 IST
Last Updated 6 ಫೆಬ್ರುವರಿ 2020, 14:34 IST
ಮಾಗಡಿ ಜಮಾಲ್‌ಪಾಳ್ಯ ವೆಂಕಟ್‌ ಇಂಟರ್‌ ನ್ಯಾಷನಲ್‌ ಸ್ಕೂಲ್‌ನಲ್ಲಿ ನಡೆದ ವಾರ್ಷಿಕೋತ್ಸವದಲ್ಲಿ ಪುಟಾಣಿಗಳು ದೇವರ ನಾಮ ಮತ್ತು ಜನಪದ ಗೀತೆಗಳನ್ನು ಹಾಡಿದರು
ಮಾಗಡಿ ಜಮಾಲ್‌ಪಾಳ್ಯ ವೆಂಕಟ್‌ ಇಂಟರ್‌ ನ್ಯಾಷನಲ್‌ ಸ್ಕೂಲ್‌ನಲ್ಲಿ ನಡೆದ ವಾರ್ಷಿಕೋತ್ಸವದಲ್ಲಿ ಪುಟಾಣಿಗಳು ದೇವರ ನಾಮ ಮತ್ತು ಜನಪದ ಗೀತೆಗಳನ್ನು ಹಾಡಿದರು   

ಮಾಗಡಿ: ಗ್ರಾಮೀಣ ಮಕ್ಕಳಲ್ಲಿ ಪ್ರತಿಭಾವಂತರಿದ್ದಾರೆ. ಆದರೆ, ಬಡತನ ಕಾರಣಕ್ಕೆ ಶಿಕ್ಷಣದಿಂದ ವಂಚಿತರಾಗಬಾರದು ಎಂದು ವಿಧಾನ ಪರಿಷತ್‌ ಸದಸ್ಯ ಅ.ದೇವೇಗೌಡ ಕಿವಿಮಾತು ಹೇಳಿದರು.

ಜಮಾಲ್‌ಪಾಳ್ಯದ ವೆಂಕಟ್‌ ಇಂಟರ್‌ ನ್ಯಾಷನಲ್‌ ಸ್ಕೂಲ್‌ ವಾರ್ಷಿಕೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು.

ಶಾಲಾ ಸಂಸ್ಥಾಪಕ ಗಿರಿಯಪ್ಪ ಮಾತನಾಡಿ ,ಗ್ರಾಮೀಣ ಮಕ್ಕಳ ಜೀವನಮಟ್ಟ ಸುಧಾರಿಸುವ ಉದ್ದೇಶದಿಂದ ಶಿಕ್ಷಣ ಸಂಸ್ಥೆ ಸ್ಥಾಪಿಸಲಾಗಿದೆ. ರೈತಾಪಿ ವರ್ಗದವರು ತಮ್ಮ ಮಕ್ಕಳನ್ನು ಶಾಲೆಗೆ ಸೇರಿಸುತ್ತಿದ್ದಾರೆ. ನಗರದ ಮಕ್ಕಳಿಗೆ ಸಿಗುವ ಎಲ್ಲ ಸವಲತ್ತು ಹಳ್ಳಿ ಮಕ್ಕಳಿಗೂ ಸಿಗಬೇಕು ಎನ್ನುವ ಉದ್ದೇಶವಿದೆ. ಶಾಲೆಗೆ ನುರಿತ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದರು.

ADVERTISEMENT

ಬೆಂಗಳೂರು ವಿಶ್ವವಿದ್ಯಾಲಯದ ಡಾ.ರಾಮಕೃಷ್ಣ, ನಿವೃತ್ತ ಅಧಿಕಾರಿ ಈಶ್ವರ್‌ ಶಿಕ್ಷಣದ ಮಹತ್ವ ಕುರಿತು ಮಾತನಾಡಿದರು. ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಮಕ್ಕಳು ನಡೆಸಿಕೊಟ್ಟ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಗಮನ ಸೆಳೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.