ADVERTISEMENT

ದೇವನಹಳ್ಳಿ: ಸಜ್ಜಾ ಕುಸಿದು ಮೂವರು ವಿದ್ಯಾರ್ಥಿಗಳಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2025, 5:10 IST
Last Updated 27 ಆಗಸ್ಟ್ 2025, 5:10 IST
ದೇವನಹಳ್ಳಿ ಪಟ್ಟಣದ ಕೋಟೆ ಸರ್ಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆಯ ಕಿಟಕಿ ಮೇಲಿನ ಸಜ್ಜಾ ಕುಸಿದು ಗಾಯಗೊಂಡ ವಿದ್ಯಾರ್ಥಿಗಳ ಯೋಗಕ್ಷೇಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌.ಮುನಿಯಪ್ಪ ಮಂಗಳವಾರ ವಿಚಾರಿಸಿದರು.
ದೇವನಹಳ್ಳಿ ಪಟ್ಟಣದ ಕೋಟೆ ಸರ್ಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆಯ ಕಿಟಕಿ ಮೇಲಿನ ಸಜ್ಜಾ ಕುಸಿದು ಗಾಯಗೊಂಡ ವಿದ್ಯಾರ್ಥಿಗಳ ಯೋಗಕ್ಷೇಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌.ಮುನಿಯಪ್ಪ ಮಂಗಳವಾರ ವಿಚಾರಿಸಿದರು.   

ದೇವನಹಳ್ಳಿ: ಪಟ್ಟಣದ ಕೋಟೆ ಸರ್ಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆಯ ಕಿಟಕಿಯ ಮೇಲಿನ ಸಜ್ಜಾ ಕುಸಿದು ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಭುವನ್‌,ದರ್ಶನ್‌ ಹಾಗೂ ಮತ್ತೊಬ್ಬ ವಿದ್ಯಾರ್ಥಿ ಘಟನೆಯಲ್ಲಿ ಗಾಯಗೊಂಡಿದ್ದು ಆಸ್ಪತ್ರೆಗೆ ಸೇರಿಸಲಾಗಿದೆ. ಮೂವರೂ ಅಪಾಯದಿಂದ ಪಾರಾಗಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌.ಮುನಿಯಪ್ಪ ಮಂಗಳವಾರ ಅಧಿಕಾರಿಗಳೊಂದಿಗೆ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು.

ADVERTISEMENT

‘ಅಧಿಕಾರಿಗಳ ಮಟ್ಟದಲ್ಲಿ ಸೂಕ್ತ ತನಿಖೆ ನಡೆಸಿ ಮುಂದಿನ ಪರಿಹಾರೋಪಾಯ ಕುರಿತು ತ್ವರಿತವಾಗಿ ಕಾರ್ಯೋನ್ಮುಖರಾಗುವಂತೆ ಸೂಚಿಸಲಾಗಿದೆ' ಎಂದು ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಬೈಲಾಂಜನಪ್ಪ, ವೈಧ್ಯಾದಿಕಾರಿ ದೀಪಕ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.