ADVERTISEMENT

ಆನೇಕಲ್: ಸೋಲೂರು ಶಾಲೆ ನಿರ್ಮಾಣಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2025, 4:18 IST
Last Updated 17 ಡಿಸೆಂಬರ್ 2025, 4:18 IST
ಆನೇಕಲ್ ತಾಲ್ಲೂಕಿನ ವಣಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೋಲೂರು ಗ್ರಾಮದಲ್ಲಿ ಭಾಷ್ ಕಂಪನಿ ಸಿಎಸ್ಆರ್ ಅನುದಾನದಿಂದ ನಿರ್ಮಿಸಲು ಉದ್ದೇಶಿಸಿರುವ ಸರ್ಕಾರಿ ಶಾಲಾ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು
ಆನೇಕಲ್ ತಾಲ್ಲೂಕಿನ ವಣಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೋಲೂರು ಗ್ರಾಮದಲ್ಲಿ ಭಾಷ್ ಕಂಪನಿ ಸಿಎಸ್ಆರ್ ಅನುದಾನದಿಂದ ನಿರ್ಮಿಸಲು ಉದ್ದೇಶಿಸಿರುವ ಸರ್ಕಾರಿ ಶಾಲಾ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು   

ಆನೇಕಲ್: ಭಾಷ್ ಕಂಪನಿ ಸಿಎಸ್ಆರ್ ಅನುದಾನದಡಿ ತಾಲ್ಲೂಕಿನ ವಣಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೋಲೂರು ಗ್ರಾಮದಲ್ಲಿ ಸರ್ಕಾರಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಬಾಷ್‌ ಕಂಪನಿಯ ಪುಂಡಲಿಕ ಕಾಮತ್‌ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಗುರುಮೂರ್ತಿ ಭೂಮಿ ಪೂಜೆ ನೆರವೇರಿಸಿದರು.

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಂಘ ಸಂಸ್ಥೆಗಳು ನೆರವು ನೀಡಬೇಕು. ಸರ್ಕಾರಿ ಶಾಲೆಗಳಲ್ಲಿ ಉತ್ತಮ ಸೌಲಭ್ಯ ದೊರೆಯುತ್ತಿದ್ದು, ಕಂಪನಿಗಳ ಸಿಎಸ್ಆರ್ ನೆರವಿನಿಂದಾಗಿ ಮೂಲ ಸೌಲಭ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಪೋಷಕರು ಇಂಗ್ಲೀಷ್ ಶಾಲೆಗಳ ವ್ಯಾಮೋಹ ಮತ್ತು ತತ್ಸಾರ ಮನೋಭಾವನೆ ಬಿಟ್ಟು ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ಸೇರಿಸಬೇಕು. ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಾಗುವುದರಿಂದ ಶಾಲೆಗಳಿಗೆ ಮತ್ತಷ್ಟು ಸೌಲಭ್ಯಗಳನ್ನು ಕಲ್ಪಿಸಲು ಸಾಧ್ಯವಾಗುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಗುರುಮೂರ್ತಿ ತಿಳಿಸಿದರು.

ವಣಕನಹಳ್ಳಿ ಗ್ರಾಮ ಪಂಚಾಯಿತಿ ಗಡಿ ಗ್ರಾಮ ಪಂಚಾಯಿತಿಯಾಗಿದೆ. ಈ ಭಾಗದ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಗಡಿ ಅಭಿವೃದ್ಧಿ ಪ್ರಾಧಿಕಾರದಿಂದ ಹೆಚ್ಚಿನ ಅನುದಾನ ನೀಡುವಂತೆ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಲಾಗುವುದು. ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಶಾಲೆಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ, ಶೌಚಾಲಯ ಸೇರಿದಂತೆ ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಸವಿತಾ ತಿಳಿಸಿದರು.

ADVERTISEMENT

ಬಾಷ್ ಕಂಪನಿಯ ಪುಂಡಲಿಕ ಕಾಮತ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎನ್. ವೈ. ಶ್ರೀನಿವಾಸ ಮೂರ್ತಿ, ಸದಸ್ಯರಾದ ಚಂದ್ರರೆಡ್ಡಿ, ಶ್ರೀನಿವಾಸ್ ರೆಡ್ಡಿ ವಾಸು, ಸಿಆರ್‌ಪಿ ನಾಗರಾಜು, ಸನತ್ ಕುಮಾರ್, ಮಂಜುನಾಥ್, ಗೋಪಾಲ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.