
ಚಂದಾಪುರ(ಆನೇಕಲ್): ತಾಲ್ಲೂಕಿನ ಚಂದಾಪುರ ಸೂರ್ಯಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯ ಚಂದಾಪುರ ರೈಲ್ವೆ ಸೇತುವೆ ಬಳಿ ಶುಕ್ರವಾರ ಸರಣಿ ಅಪಘಾತ ಸಂಭವಿಸಿದ್ದು, ಮೂರು ವಾಹನಗಳು ಜಖಂಗೊಂಡಿವೆ. ಇಬ್ಬರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಚಂದಾಪುರದಿಂದ ಅತ್ತಿಬೆಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಯೊಂದು ಎರಡು ಕಾರುಗಳಿಗೆ ಮತ್ತು ಬಸ್‌ಗೆ ಡಿಕ್ಕಿ ಹೊಡೆದಿದೆ. ಏಕಾಏಕಿ ಡಿಕ್ಕಿ ಹೊಡೆದಿದ್ದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದ ಇತರೆ ವಾಹನಗಳ ಸಂಚಾರಕ್ಕೂ ತೊಂದರೆ ಆಯಿತು. ಸರಣಿ ಅಪಘಾತದಿಂದ ಒಂದು ಗಂಟೆಗೂ ಹೆಚ್ಚು ಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು. ಕಿ.ಮೀ.ಗಟ್ಟಲೇ ವಾಹನಗಳು ನಿಂತಿದ್ದವು. ಲಾರಿ ಚಾಲಕನನ್ನು ಚಂದಾಪುರ ಸೂರ್ಯಸಿಟಿ ಪೊಲೀಸರು ಬಂಧಿಸಿ, ಲಾರಿಯನ್ನು ವಶಪಡಿಸಿಕೊಂಡಿದ್ದಾರೆ.
ಚಂದಾಪುರದ ಹೀಲಲಿಗೆ ಕ್ರಾಸ್ ಬಳಿ ಕ್ಯಾಂಟರ್ ವಾಹನವೊಂದು ಆಯ ತಪ್ಪಿ ಮುಗಿಚಿ ಬಿದ್ದಿದೆ. ವಾಹನ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದೆ. ಕ್ಯಾಂಟರ್ ವಾಹನವನ್ನು ಮೇಲಕ್ಕೇತ್ತುವುದೇ ಸವಾಲಾಗಿತ್ತು. ಸ್ಥಳೀಯರು ಹರಸಾಹಸ ಪಟ್ಟು ಕ್ಯಾಂಟರ್ ಅನ್ನು ಮೇಲಕ್ಕೇತ್ತಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.