ADVERTISEMENT

ದೇವನಹಳ್ಳಿ: ಕೃಷಿ ಅಧಿಕಾರಿಗಳು ಕ್ಷೇತ್ರಕ್ಕೆ ಭೇಟಿ ನೀಡಲು ಮನವಿ

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2025, 2:07 IST
Last Updated 20 ಆಗಸ್ಟ್ 2025, 2:07 IST
ದೇವನಹಳ್ಳಿ ತಾಲ್ಲೂಕು ಕೃಷಿ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಜಿಲ್ಲಾ ಕೃಷಿ ಇಲಾಖೆ ಹಾಗೂ ಕೃಷಿಕ ಸಮಾಜ ವತಿಯಿಂದ ಹಮ್ಮಿಕೊಂಡಿದ್ದ ಪದಾಧಿಕಾರಿಗಳ ಸಭೆಯಲ್ಲಿ ಅಧಿಕಾರಿಗಳು, ರೈತರು ಭಾಗವಹಿಸಿದ್ದರು
ದೇವನಹಳ್ಳಿ ತಾಲ್ಲೂಕು ಕೃಷಿ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಜಿಲ್ಲಾ ಕೃಷಿ ಇಲಾಖೆ ಹಾಗೂ ಕೃಷಿಕ ಸಮಾಜ ವತಿಯಿಂದ ಹಮ್ಮಿಕೊಂಡಿದ್ದ ಪದಾಧಿಕಾರಿಗಳ ಸಭೆಯಲ್ಲಿ ಅಧಿಕಾರಿಗಳು, ರೈತರು ಭಾಗವಹಿಸಿದ್ದರು   

ದೇವನಹಳ್ಳಿ: ರೇಷ್ಮೆ ಕೃಷಿಗೆ ಹೆಚ್ಚಿನ ಉತ್ತೇಜನ ನೀಡಬೇಕು. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕ್ಷೇತ್ರವಾರು ಭೇಟಿ ನೀಡಿ ರೈತರ ಕಷ್ಟಗಳಿಗೆ ಸ್ಪಂದಿಸಿ ಎಂದು ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಎಸ್‌.ಆರ್‌.ರವಿಕುಮಾರ್‌ ತಿಳಿಸಿದರು.

ಪಟ್ಟಣದ ಬಿ.ಬಿ ರಸ್ತೆಯಲ್ಲಿರುವ ತಾಲ್ಲೂಕು ಕೃಷಿ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಮಂಗಳವಾರ ಜಿಲ್ಲಾ ಕೃಷಿ ಇಲಾಖೆ ಹಾಗೂ ಜಿಲ್ಲಾ ಕೃಷಿಕ ಸಮಾಜದ ವತಿಯಿಂದ ಹಮ್ಮಿಕೊಂಡಿದ್ದ ಜಿಲ್ಲಾ ಕೃಷಿಕ ಸಮಾಜದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಸೋಲೂರು ಗ್ರಾಮದಲ್ಲಿ ಎರಡು ಎಕರೆ ಜಮೀನಿನಲ್ಲಿ ಮಿಶ್ರ ಬೆಳೆ ಬೆಳೆಯುತ್ತಿದ್ದಾರೆ. ಅದೇ ರೀತಿ ಮಿಶ್ರ ಬೆಳೆಯನ್ನು ರೈತರು ಬೆಳೆಯಬೇಕು ಎಂದು ಹೇಳಿದರು.

ADVERTISEMENT

ಜಿಲ್ಲೆಯಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರ ದಾಸ್ತಾನು ಮಾಡಲಾಗಿದೆ. ರೈತರು ಬಿತ್ತನೆ ಕಾರ್ಯದಲ್ಲಿ ತೊಡಗಿರುವುದರಿಂದ ಅಗತ್ಯ ಬಿತ್ತನೆ ಬೀಜ ನೀಡಲಾಗುತ್ತಿದೆ. ರೈತರಿಗೆ ರಸಗೊಬ್ಬರ ಸಮಸ್ಯೆ ಬರದಂತೆ ನಿಗಾ ವಹಿಸಲಾಗಿದೆ ಎಂದರು.

ನೆಲಮಂಗಲದಲ್ಲಿ ಬಯೊ ಮೆಟ್ರಿಕ್ ಸಮಸ್ಯೆ ಬಗೆಹರಿಸಲಾಗಿದೆ. ಕೃಷಿ ಇಲಾಖೆ ಅಗತ್ಯ ಮಾಹಿತಿ ರೈತರಿಗೆ ನೀಡಲಾಗುತ್ತಿದೆ. ವಿವಿಧ ಇಲಾಖೆ ಅಧಿಕಾರಿಗಳು, ರೈತರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಸಭೆಗೆ ಮಾಹಿತಿ ನೀಡಿರು.

ಜಿಲ್ಲೆಯಲ್ಲಿ 62,000 ಹೆಕ್ಟೇರ್‌ ರಾಗಿ ಬೆಳೆಯಲಾಗುತ್ತಿದೆ. ಜಿಲ್ಲೆಯಲ್ಲಿ ರಾಗಿ ಪ್ರಮುಖ ಬೆಳೆಯಾಗಿದೆ. ರೈತರ ಸಮಸ್ಯೆ ಏನೇ ಇದ್ದರೂ ಪಟ್ಟಿ ಮಾಡಿ ಕೊಡಿ. ಕೃಷಿ ಸಚಿವರಿಗೆ ಮಾಹಿತಿ ನೀಡಿ ಮನವಿ ಮಾಡಲಾಗುವುದು ಎಂದು ಹೇಳಿದರು.

ರೇಷ್ಮೆ ಇಲಾಖೆ ಉಪ ನಿರ್ದೇಶಕ ಲಕ್ಷ್ಮಣ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಗುಣವಂತ, ಜಿಲ್ಲಾ ಕೃಷಿ ಜಂಟಿ ನಿರ್ದೇಶಕಿ ಕಲಾವತಿ ಮಾತನಾಡಿದರು.

ಇದೇ ವೇಳೆ ಕೃಷಿ ಇಲಾಖೆ ಉಪ ನಿರ್ದೇಶಕಿ ಗಾಯತ್ರಿ, ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕಿ ಸುಶೀಲಮ್ಮ, ಜಿಲ್ಲಾ ಕೃಷಿಕ ಸಮಾಜದ ಪ್ರಧಾನ ಕಾರ್ಯದರ್ಶಿ ಬೂದಿಗೆರೆ ಕೆ.ಶ್ರೀನಿವಾಸಗೌಡ, ಜಿಲ್ಲಾ ಉಪಾಧ್ಯಕ್ಷ ಎನ್.ಆರ್ ಹೊನ್ನಸಿದ್ದಯ್ಯ, ಖಜಾಂಚಿ ಟಿ.ಎಂ ಅಶೋಕ್, ದೊಡ್ಡಬಳ್ಳಾಪುರ ತಾಲ್ಲೂಕು ಕೃಷಿಕ ಸಮಾಜದ ಅಧ್ಯಕ್ಷ ಮುರುಳಿಧರ್, ರೇಷ್ಮೆ ವಿಸ್ತರಣಾಧಿಕಾರಿ ಪ್ರಭಾಕರ್, ಪಶುಪಾಲನಾ ಇಲಾಖೆ ಮುಖ್ಯ ಪಶುವೈದ್ಯಾಧಿಕಾರಿ ಡಾ.ನಾರಾಯಣಸ್ವಾಮಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.