ADVERTISEMENT

ಲಯನ್ಸ್ ಕ್ಲಬ್‌  ಸೇವಾ ಕಾರ್ಯ ಶ್ಲಾಘನೀಯ

​ಪ್ರಜಾವಾಣಿ ವಾರ್ತೆ
Published 3 ಜುಲೈ 2019, 13:32 IST
Last Updated 3 ಜುಲೈ 2019, 13:32 IST
ಬಿಜೆಪಿ ಮುಖಂಡ ಬಿ.ಸಿ.ನಾರಾಯಣಸ್ವಾಮಿ ಮಾತನಾಡಿದರು
ಬಿಜೆಪಿ ಮುಖಂಡ ಬಿ.ಸಿ.ನಾರಾಯಣಸ್ವಾಮಿ ಮಾತನಾಡಿದರು   

ದೊಡ್ಡಬಳ್ಳಾಪುರ:‘ತಾವು ಗಳಿಸಿದ ಸಂಪತ್ತಿನಲ್ಲಿ ಸ್ವಲ್ಪ ಮಟ್ಟಿಗಾದರೂ ಸತ್ಕಾರ್ಯಗಳಿಗೆ ಮೀಸಲಿಡುವ ಮೂಲಕ ನಮ್ಮ ಬದುಕನ್ನು ಸಾರ್ಥಕಗೊಳಿಸಿಕೊಳ್ಳಬೇಕು’ ಎಂದು ಪುಷ್ಪಾಂಡಜ ಆಶ್ರಮದ ದಿವ್ಯಜ್ಞಾನಾನಂದಗಿರಿ ಸ್ವಾಮೀಜಿ ಹೇಳಿದರು.

ಅವರು ನಗರದ ಲಯನ್ಸ್ ಭವನದಲ್ಲಿ ನಡೆದ ಲಯನ್ಸ್ ಕ್ಲಬ್‍ನ ಉಚಿತ ಕಣ್ಣಿನ ಪರೀಕ್ಷಾ ಶಿಬಿರ ಉದ್ಘಾಟಿಸಿ ಮಾತನಾಡಿದರು.

‘ಆರೋಗ್ಯ ಸಂಪತ್ತು ಎಲ್ಲ ಸಂಪತ್ತಿಗಿಂತ ಮುಖ್ಯ. ಇದನ್ನು ಗಳಿಸಲು ನಾವು ಶ್ರಮ ಪಡಬೇಕಾಗುತ್ತದೆ. ಆರೋಗ್ಯ ಕಾಪಾಡಿಕೊಳ್ಳಲು ನೆರವಾಗುವ ಸಮುದಾಯ ಹಾಗೂ ಸಂಘಟನೆಗಳ ಕಾರ್ಯ ಶ್ಲಾಘನೀಯ’ ಎಂದರು.

ADVERTISEMENT

ಬಿಜಿಪಿ ಮುಖಂಡ ಹಾಗೂ ಶಿಬಿರದ ಪ್ರಾಯೋಜಕ ಬಿ.ಸಿ.ನಾರಾಯಣಸ್ವಾಮಿ ಮಾತನಾಡಿ, ‘ಸೇವಾ ಕಾರ್ಯಗಳಲ್ಲಿ ಮುಂಚೂಣಿಯಲ್ಲಿರುವ ಲಯನ್ಸ್ ಸಂಸ್ಥೆಯ ಉಚಿತ ನೇತ್ರ ಶಸ್ತ್ರಚಿಕಿತ್ಸಾ ಶಿಬಿರಗಳು, ಇದುವರೆಗೂ ಲಕ್ಷಾಂತರ ಜನರಿಗೆ ದಾರಿದೀಪವಾಗಿವೆ. ಶರೀರಕ್ಕೆ ಪ್ರಧಾನವಾದ ಕಣ್ಣಿನ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಅಗತ್ಯವಾಗಿದೆ. ಬಡಜನರಿಗೆ ಕಣ್ಣಿನ ಶಸ್ತ್ರಚಿಕಿತ್ಸೆಗಾಗಿ ನೆರವಾಗುತ್ತಿರುವ ಲಯನ್ಸ್ ಕ್ಲಬ್‍ನಂತಹ ಸೇವಾ ಸಂಸ್ಥೆಗಳ ಪಾತ್ರ ಶ್ಲಾಘನೀಯ. ಲಯನ್ಸ್ ಸೇವಾ ಚಟುವಟಿಕೆಗಳು ಇನ್ನಷ್ಟು ವಿಸ್ತರಿಸಲಿ’ ಎಂದು ಹಾರೈಸಿದರು.

ಲಯನ್ಸ್ ಕ್ಲಬ್ ಅಧ್ಯಕ್ಷ ಕೆ.ಮೋಹನ್‌ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಮುಖಂಡ ಬಿ.ಸಿ.ನಾರಾಯಣಸ್ವಾಮಿ ಶಿಬಿರವನ್ನು ಪ್ರಾಯೋಜಿಸಿದ್ದರು.

ಲಯನ್ಸ್ ಕ್ಲಬ್ ಕಾಯದರ್ಶಿ ಕೆ.ಶಿವಶಂಕರ್, ಖಜಾಂಚಿ ಕೆ.ಜಿ.ಗೋಪಾಲ್, ಸಹ ಕಾಯದರ್ಶಿ ಪುಷ್ಪಾಶಿವಶಂಕರ್, ಲಯನ್ಸ್ ಚಾರಿಟಬಲ್ ಟ್ರಸ್ಟ್ ಕಾರ್ಯದರ್ಶಿ ಎಲ್.ಕೃಷ್ಣಮೂರ್ತಿ, ಲಯನ್ಸ್ ಕ್ಲಬ್ ನಿಕಟಪೂರ್ವ ಅಧ್ಯಕ್ಷ ಕೆ.ವಿ.ಪ್ರಭುಸ್ವಾಮಿ, ಲಯನ್ಸ್‌ನ ಮಹಾದೇವ್, ಲಕ್ಕೂರ್ ಪ್ರದೀಪ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.