ADVERTISEMENT

ಹೊಸಕೋಟೆ: ಶರನ್ನವರಾತ್ರಿ ಉತ್ಸವ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2021, 5:01 IST
Last Updated 7 ಅಕ್ಟೋಬರ್ 2021, 5:01 IST

ಹೊಸಕೋಟೆ: ನಗರದ ಕೋಟೆಯಲ್ಲಿರುವ ಶ್ರೀಪಾಂಡುರಂಗ ಸ್ವಾಮಿ ದೇವಾಲಯದಲ್ಲಿ ಶರನ್ನವರಾತ್ರಿ ಪ್ರಯುಕ್ತ ಕರ್ನಾಟಕ ಕ್ಷತ್ರೀಯ ಮರಾಠ ಪರಿಷತ್ ವತಿಯಿಂದ ಪ್ರತಿನಿತ್ಯ ದೇವರಿಗೆ ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ದೇವರಿಗೆ ವಿಶೇಷ ಅಲಂಕಾರ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಗುವುದು. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಬಂದು ದೇವರ ಕೃಪೆಗೆ ಪಾತ್ರರಾಗಬೇಕು ಎಂದು ಮರಾಠ ಪರಿಷತ್‌ನ ತಾಲ್ಲೂಕು ಅಧ್ಯಕ್ಷ ವೆಂಕೋಬರಾವ್ ಪ್ರಕಟಣೆಯಲ್ಲಿ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT