ADVERTISEMENT

ಕೊನೆಗೂ ಕೂಡಿ ಬಂದ ಉದ್ಘಾಟನಾ ಭಾಗ್ಯ

ಶಿಡ್ಲಘಟ್ಟ: ನಾನಾ ಕಟ್ಟಡಗಳ ಉದ್ಘಾಟನೆ ಇಂದು

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2025, 16:11 IST
Last Updated 28 ಏಪ್ರಿಲ್ 2025, 16:11 IST
ಶಿಡ್ಲಘಟ್ಟ ತಾಲ್ಲೂಕು ಹಂಡಿಗನಾಳ ಗ್ರಾಮ ಪಂಚಾಯಿತಿಯ ನೂತನ ಕಟ್ಟಡ
ಶಿಡ್ಲಘಟ್ಟ ತಾಲ್ಲೂಕು ಹಂಡಿಗನಾಳ ಗ್ರಾಮ ಪಂಚಾಯಿತಿಯ ನೂತನ ಕಟ್ಟಡ   

ಶಿಡ್ಲಘಟ್ಟ: ಕಟ್ಟಡ ನಿರ್ಮಾಣ ಪೂರ್ಣಗೊಂಡಿದ್ದರೂ ನಾನಾ ಕಾರಣಗಳಿಂದ ನೆನೆಗಿದಿಗೆ ಬಿದ್ದಿದ್ದ ಸರ್ಕಾರಿ ಕಟ್ಟಡಗಳಿಗೆ ಕೊನೆಗೂ ಉದ್ಘಾಟನಾ ಭಾಗ್ಯ ಕೂಡಿ ಬಂದಿದೆ.

ಹಂಡಿಗನಾಳ ಗ್ರಾಮ ಪಂಚಾಯಿತಿ ಕಟ್ಟಡ, ಕೃಷಿ ಸಹಾಯಕ ನಿರ್ದೇಶಕರ ಕಚೇರಿ, ರೈತ ಸಂಪರ್ಕ ಕೇಂದ್ರ, ದೇವರಾಜು ಅರಸು ಭವನಗಳ ಉದ್ಘಾಟನೆ ಏಪ್ರಿಲ್‌ 29ರಂದು ನಡೆಯಲಿದೆ.

ಹಂಡಿಗನಾಳ ಗ್ರಾಮದಲ್ಲಿ ಹಂಡಿಗನಾಳ ಗ್ರಾಮ ಪಂಚಾಯಿತಿಯ ನೂತನ ಕಟ್ಟಡ ನಿರ್ಮಾಣವಾಗಿದ್ದರೆ, ಕೃಷಿ ಸಹಾಯಕ ನಿರ್ದೇಶಕರ ಕಚೇರಿ, ರೈತ ಸಂಪರ್ಕ ಕೇಂದ್ರ, ದೇವರಾಜು ಅರಸು ಭವನವು ವರದನಾಯಕನಹಳ್ಳಿ ಬಳಿಯ ಸರ್ಕಾರಿ ಜಾಗದಲ್ಲಿ ನಿರ್ಮಾಣಗೊಂಡಿವೆ.

ADVERTISEMENT

ಕ್ಷೇತ್ರದ ಶಾಸಕ ಬಿ.ಎನ್.ರವಿಕುಮಾರ್ ಅವರು ಕಟ್ಟಡಗಳ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಉದ್ಘಾಟನೆ ನೆರವೇರಿಸಲಿದ್ದಾರೆ. ಸಂಬಂಧಿಸಿದ ಇಲಾಖೆ ಸಚಿವರು, ಸಂಸದ ಮಲ್ಲೇಶ್‌ಬಾಬು, ವಿಧಾನ ಪರಿಷತ್‌ ಸದಸ್ಯರು, ಹಿರಿಯ ಅಧಿಕಾರಿಗಳು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.