ADVERTISEMENT

ಶಿಡ್ಲಘಟ್ಟ | ರೇಷ್ಮೆ ಸೊಪ್ಪಿಗೆ ವಿಷ: ಹುಳಗಳ ಸಾವು

​ಪ್ರಜಾವಾಣಿ ವಾರ್ತೆ
Published 29 ಜೂನ್ 2025, 14:03 IST
Last Updated 29 ಜೂನ್ 2025, 14:03 IST
ಶಿಡ್ಲಘಟ್ಟ ತಾಲ್ಲೂಕಿನ ಲಕ್ಕಹಳ್ಳಿಯಲ್ಲಿ ಸಾವಿಗೀಡಾಗಿರುವ ರೇಷ್ಮೆ ಹುಳುಗಳನ್ನು ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕ ಅಕ್ಮಲ್ ಪಾಷ ಮತ್ತು ವಿಸ್ತರಣಾಧಿಕಾರಿ ಎಂ.ಸಿ.ಭಾರತಿ ಪರಿಶೀಲಿಸಿದರು
ಶಿಡ್ಲಘಟ್ಟ ತಾಲ್ಲೂಕಿನ ಲಕ್ಕಹಳ್ಳಿಯಲ್ಲಿ ಸಾವಿಗೀಡಾಗಿರುವ ರೇಷ್ಮೆ ಹುಳುಗಳನ್ನು ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕ ಅಕ್ಮಲ್ ಪಾಷ ಮತ್ತು ವಿಸ್ತರಣಾಧಿಕಾರಿ ಎಂ.ಸಿ.ಭಾರತಿ ಪರಿಶೀಲಿಸಿದರು   

ಶಿಡ್ಲಘಟ್ಟ: ತಾಲ್ಲೂಕಿನ ಲಕ್ಕಹಳ್ಳಿಯ ನಿವೃತ್ತ ಉಪನ್ಯಾಸಕ ಆರ್.ಆಂಜನೇಯ ಅವರ ಹಿಪ್ಪುನೇರಳೆ ಸೊಪ್ಪಿಗೆ ದುಷ್ಕರ್ಮಿಗಳು ವಿಷವನ್ನು ಸಿಂಪಡಿಸಿದ್ದರಿಂದಾಗಿ ರೇಷ್ಮೆ ಹುಳುಗಳು ಸಾವಿಗೀಡಾಗಿವೆ.

ಹಣ್ಣಾದ ಹಂತದಲ್ಲಿದ್ದ ಮತ್ತು ಮೂರನೇ ಹಂತದಲ್ಲಿದ್ದ ಒಟ್ಟಾರೆ 300 ಮೊಟ್ಟೆಗಳ ಹುಳುಗಳು ಸತ್ತಿರುವುದರಿಂದ ರೈತರಿಗೆ ಸುಮಾರು ₹2.5 ಲಕ್ಷ  ನಷ್ಟವಾಗಿದೆ. ನಾಲ್ಕು ಎಕರೆ ಹಿಪ್ಪುನೇರಳೆ ತೋಟದಲ್ಲಿ ಒಂದು ಎಕರೆ ಸೊಪ್ಪಿಗೆ ದುಷ್ಕರ್ಮಿಗಳು ಶನಿವಾರ ವಿಷ ಸಿಂಪಡಿಸಿದ್ದು, ಆ ಸೊಪ್ಪನ್ನು ಹುಳುಗಳಿಗೆ ತಿನ್ನಲು ಹಾಕಿದ್ದರಿಂದ ಸಂಪೂರ್ಣ ಬೆಳೆ ನಾಶವಾಗಿದೆ  ಎಂದು ಆರ್.ಆಂಜನೇಯ ತಿಳಿಸಿದ್ದಾರೆ.

ಭಾನುವಾರ ಸ್ಥಳಕ್ಕೆ ಭೇಟಿ ನೀಡಿದ್ದ ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕ ಅಕ್ಮಲ್ ಪಾಷ ಮತ್ತು ವಿಸ್ತರಣಾಧಿಕಾರಿ ಎಂ.ಸಿ.ಭಾರತಿ ಅವರು ಸೊಪ್ಪಿಗೆ ವಿಷ ಸಿಂಪಡನೆಯನ್ನು ದೃಢೀಕರಿಸಿದ್ದು, ಅದರಿಂದಲೇ ಹುಳುಗಳು ಸತ್ತಿವೆ ಎಂದು ಹೇಳಿದ್ದಾರೆ.

ADVERTISEMENT

ಈ ಸಂಬಂಧ ರೈತ ಪೋಲೀಸರಿಗೆ ದೂರು ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.