ADVERTISEMENT

ದೇಶಕ್ಕೆ ಹೆಸರಾದ ದಾಸೋಹ ಪದ್ಧತಿ

​ಪ್ರಜಾವಾಣಿ ವಾರ್ತೆ
Published 20 ಜನವರಿ 2020, 14:34 IST
Last Updated 20 ಜನವರಿ 2020, 14:34 IST
ಚನ್ನರಾಯಪಟ್ಟಣ ಹೋಬಳಿ ಬೂದಿಗೆರೆಯ ಚಂದ್ರಮೌಳೇಶ್ವರ ದೇವಾಲಯದ ಆವರಣದಲ್ಲಿ ಡಾ.ಶಿವಕುಮಾರಸ್ವಾಮೀಜಿ ಅವರ ಮೊದಲನೆ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು
ಚನ್ನರಾಯಪಟ್ಟಣ ಹೋಬಳಿ ಬೂದಿಗೆರೆಯ ಚಂದ್ರಮೌಳೇಶ್ವರ ದೇವಾಲಯದ ಆವರಣದಲ್ಲಿ ಡಾ.ಶಿವಕುಮಾರಸ್ವಾಮೀಜಿ ಅವರ ಮೊದಲನೆ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು   

ವಿಜಯಪುರ: ಸಮಾಜದಲ್ಲಿ ಪ್ರತಿಯೊಬ್ಬರೂ ಜಾತಿ ಹಾಗೂ ಧರ್ಮಕ್ಕೆ ಸೀಮಿತವಾಗದೆ ನೆರೆಹೊರೆಯೊಂದಿಗೆ ಬೆರೆತು ಅನ್ನೋನ್ಯ ಜೀವನ ನಡೆಸುವುದನ್ನು ಮೈಗೂಡಿಸಿಕೊಳ್ಳಬೇಕು ಎಂದು ಬೂದಿಗೆರೆ ಗ್ರಾಮ ಪಂಚಾಯಿತಿ ಸದಸ್ಯ ನಟರಾಜ್ ತಿಳಿಸಿದರು.

ಚನ್ನರಾಯಪಟ್ಟಣ ಹೋಬಳಿ ಬೂದಿಗೆರೆ ಚಂದ್ರಮೌಳೇಶ್ವರ ದೇವಾಲಯದ ಆವರಣದಲ್ಲಿ ಡಾ.ಶಿವಕುಮಾರಸ್ವಾಮೀಜಿ ಅವರ ಮೊದಲನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.

ಧರ್ಮದ ಸಾರ ಮೈಗೂಡಿಸಿಕೊಂಡರೆ ಬದುಕು ಸಾರ್ಥಕಗೊಳ್ಳುತ್ತದೆ. ಸತ್ಯ, ನಿಷ್ಠೆ ಹಾಗೂ ಪ್ರಾಮಾಣಿಕ ಮೌಲ್ಯ ಅಳವಡಿಸಿಕೊಳ್ಳಬೇಕು. ಆಗ ಮಾತ್ರ ಮೋಕ್ಷ ಪ್ರಾಪ್ತಿಯಾಗುತ್ತದೆ ಎಂದರು.

ADVERTISEMENT

ಗ್ರಾಮ ಪಂಚಾಯಿತಿ ಮುಖಂಡ ಪ್ರಭಾಕರ್ ಮಾತನಾಡಿ, ಸಿದ್ದಗಂಗಾಮಠದಲ್ಲಿ ಜಾತಿ, ಮತ, ಧರ್ಮ ಮೀರಿ ಎಲ್ಲ ವರ್ಗದ ಮಕ್ಕಳಿಗೆ ಉತ್ತಮ ಸಂಸ್ಕಾರ ಸಿಗುತ್ತದೆ. ಜತೆಗೆ ಶಿಕ್ಷಣ ನೀಡುವ ಮೂಲಕ ಸಮಾಜವನ್ನು ಸರಿದಾರಿಗೆ ತರುವ ಕೆಲಸ ಮಾಡುತ್ತಿದೆ ಎಂದರು.

ಮುಖಂಡ ಗಣೇಶಪ್ಪ ಮಾತನಾಡಿ, ದಾಸೋಹದ ಮೂಲಕ ದೇಶದಲ್ಲಿಯೇ ಹೆಸರುವಾಸಿಯಾಗಿದ್ದ ಶಿವಕುಮಾರ ಸ್ವಾಮೀಜಿ ಅವರ ಅಗಲಿಕೆ ದೇಶದ ಭಕ್ತ ಕೋಟಿಗೆ ಅಪಾರವಾದ ನೋವುಂಟಾಗಿದೆ. ಬಡ ವರ್ಗದ ಮಕ್ಕಳಿಗೆ ಶಿಕ್ಷಣ ನೀಡಿದ ಶ್ರೀಗಳು ಬಸವಣ್ಣನ ತತ್ವದಲ್ಲಿ ನಂಬಿಕೆ ಇಟ್ಟವರು. ಅವರ ಅಶಯದಂತೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

ವೀರಶೈವ ಸಮಾಜದ ಮುಖಂಡರಾದ ರಾಜಶೇಖರ್, ಅವಿನಾಶ್, ಮಂಜುನಾಥ್, ಶ್ರೀಧರ್, ಚಂದ್ರಶೇಖರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.