ADVERTISEMENT

ಅರಸು ಹೊಲಿಕೆ ಸರಿಯಲ್ಲ; ಡಾ.ಕೆ.ಸುಧಾಕರ್

​ಪ್ರಜಾವಾಣಿ ವಾರ್ತೆ
Published 7 ಜನವರಿ 2026, 3:02 IST
Last Updated 7 ಜನವರಿ 2026, 3:02 IST
ದೇವನಹಳ್ಳಿ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜಾರಿಗೆ ತಂದಿರುವ ನೂತನ ಪಾರ್ಕಿಂಗ್‌ ನಿಯಮದ ಕುರಿತು ಖಾಸಗಿ ಟ್ಯಾಕ್ಸಿ ಚಾಲಕರೊಂದಿಗೆ ಸಂಸದ ಡಾ.ಕೆ.ಸುಧಾಕರ್‌ ಮಾತನಾಡಿದರು.
ದೇವನಹಳ್ಳಿ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜಾರಿಗೆ ತಂದಿರುವ ನೂತನ ಪಾರ್ಕಿಂಗ್‌ ನಿಯಮದ ಕುರಿತು ಖಾಸಗಿ ಟ್ಯಾಕ್ಸಿ ಚಾಲಕರೊಂದಿಗೆ ಸಂಸದ ಡಾ.ಕೆ.ಸುಧಾಕರ್‌ ಮಾತನಾಡಿದರು.   

ದೇವನಹಳ್ಳಿ: ‘ಸುದೀರ್ಘ ಅವಧಿಯಿಂದ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿರುವ ಸಿದ್ದರಾಮಯ್ಯ ಅವರನ್ನು ಅಭಿನಂದಿಸುತ್ತೇನೆ. ಆದರೆ ದೇವರಾಜ ಅರಸು ಅವರಿಗೆ ಹೋಲಿಕೆ ಮಾಡಿಕೊಳ್ಳುವುದು ಸರಿಯಲ್ಲ’ ಎಂದು ಸಂಸದ ಡಾ.ಕೆ.ಸುಧಾಕರ್‌ ಹೇಳಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, 2013ರಲ್ಲಿ ಸಿಎಂ ಸಿದ್ದರಾಮಯ್ಯ ಅವರು ಉತ್ತಮ ಆಡಳಿತ ನೀಡಿದ್ದರು. ಆದರೆ 2023 ರಿಂದ ನೀಡುತ್ತಿರುವ ಆಡಳಿತ ಜನರಿಗೆ ಸಾಕಾಗಿದೆ. ಸಿದ್ದರಾಮಯ್ಯ ಅವರಿಗೆ ಇನ್ನೂ ಸಿ.ಎಂ ಆಗಿರಬೇಕೆಂಬ ಬಯಕೆ ಇದೆ. ಆದರೆ ಈ ಸರ್ಕಾರ ಹೋಗಲಿ ಎಂದೇ ಜನರು ಬಯಸುತ್ತಿದ್ದಾರೆ ಎಂದರು.

ದೇವರಾಜು ಅರಸು ತಂದ ಸುಧಾರಣೆಗಳನ್ನು ಬೇರೆ ಯಾರೂ ತಂದಿಲ್ಲ. ಅವರು ಬಡವರಿಗೆ ಭೂಮಿ ನೀಡಿದ್ದರು. ಅವರು ನಿಜವಾದ ಬದ್ಧತೆ ಇದ್ದ ಹಿಂದುಳಿದ ವರ್ಗದ ನಾಯಕ. ಅವರ ದಾರಿಯಲ್ಲಿ ಸಿದ್ದರಾಮಯ್ಯನವರು ನಡೆದಿದ್ದರೆ ಚೆನ್ನಾಗಿರುತ್ತಿತ್ತು. ದೇವರಾಜು ಅರಸು ಅವರು ಜನರ ಬದುಕಿಗೆ ಊಟ ನೀಡಿದ್ದರು. ಒಂದು ಹಬ್ಬಕ್ಕೆ ನೀಡುವ ಊಟಕ್ಕೂ ಜೀವನಕ್ಕೆ ನೀಡುವ ಊಟಕ್ಕೂ ವ್ಯತ್ಯಾಸವಿದೆ ಎಂದು ಹೇಳಿದರು.

ADVERTISEMENT
ನೂತನ ಪಾರ್ಕಿಂಗ್‌ ವ್ಯವಸ್ಥೆಯಲ್ಲಿರುವ ನೂನ್ಯತೆಗಳು ಪರಿಹಾರೋಪಾಯಗಳ ಕುರಿತು ನಡೆದ ಸಭೆಯಲ್ಲಿ ಸಂಸದ ಡಾ.ಕೆ.ಸುಧಾಕರ್‌ ಡಿಸಿಪಿ ಜಿ.ಕೆ. ಮಿಥುನ್‌ ಕುಮಾರ್‌ ಪೂರ್ವ ಜಂಟಿ ಪೊಲೀಸ್‌ ಆಯುಕ್ತರಾದ ರಮೇಶ್‌ ಬಿ ಸೇರಿದಂತೆ ವಿವಿಧ ಟ್ಯಾಕ್ಸಿ ಸಂಘಟನೆಯ ಮುಖಂಡರು ಭಾಗಿಯಾಗಿ ಚರ್ಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.