ADVERTISEMENT

‘ಸಿದ್ದರಾಮಯ್ಯ, ಡಿ.ಕೆ.ಶಿ. ಹೇಳಿದರಲ್ಲಿ ತಪ್ಪಿಲ್ಲ’

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2019, 9:06 IST
Last Updated 21 ಏಪ್ರಿಲ್ 2019, 9:06 IST
   

ಹೊಸಪೇಟೆ: ‘ಶಾಸಕ ಸಿದ್ದರಾಮಯ್ಯ, ಸಚಿವ ಡಿ.ಕೆ. ಶಿವಕುಮಾರ ಅವರು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಎಂದು ಹೇಳಿರುವುದರಲ್ಲಿ ಯಾವುದೇ ತಪ್ಪಿಲ್ಲ’ ಎಂದು ಮಾಜಿಶಾಸಕ ಎಚ್‌. ಆಂಜನೇಯ ಸಮರ್ಥಿಸಿಕೊಂಡಿದ್ದಾರೆ.

ಭಾನುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ನಾನು ಮತ್ತೆ ಸಿ.ಎಂ. ಆದರೆ ಹತ್ತು ಕೆ.ಜಿ. ಅಕ್ಕಿ ಕೊಡುವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ನಾನು ಮುಖ್ಯಮಂತ್ರಿಯಾದರೆ ಬಿ.ಎಸ್‌.ಯಡಿಯೂರಪ್ಪನವರ ಡೈರಿ ವಿಷಯ ಬಹಿರಂಗಪಡಿಸುವೆ ಎಂದು ಶಿವಕುಮಾರ ಹೇಳಿದ್ದಾರೆ. ಇದರಲ್ಲಿ ತಪ್ಪೇನೂ ಇಲ್ಲ’ ಎಂದರು.

‘ಕಾಂಗ್ರೆಸ್‌ನಲ್ಲಿ ಆಂತರಿಕ ಪ್ರಜಾಪ್ರಭುತ್ವ ಜೀವಂತವಾಗಿದೆ ಎನ್ನುವುದಕ್ಕೆ ಸಿ.ಎಂ. ಸ್ಥಾನದ ಆಕಾಂಕ್ಷಿ ಎಂದು ಇಬ್ಬರು ಮುಖಂಡರು ನೀಡಿರುವ ಹೇಳಿಕೆಯೇ ಸಾಕ್ಷಿ. ಬಿಜೆಪಿ ಮುಖಂಡರಾದ ಜಗದೀಶ ಶೆಟ್ಟರ್‌, ಕೆ.ಎಸ್‌. ಈಶ್ವರಪ್ಪ, ಆರ್‌. ಅಶೋಕ್‌, ಗೋವಿಂದ ಕಾರಜೋಳ ಈ ಧೈರ್ಯ ತೋರಿಸುವರೇ. ಅದು ಸಾಧ್ಯವಿಲ್ಲ. ಏಕೆಂದರೆ ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವವಿಲ್ಲ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.