ADVERTISEMENT

ಶಿಡ್ಲಘಟ್ಟ: ಧರ್ಮರಾಯ ದ್ರೌಪತಮ್ಮ ಹೂವಿನ ಕರಗ

​ಪ್ರಜಾವಾಣಿ ವಾರ್ತೆ
Published 1 ಮೇ 2024, 12:22 IST
Last Updated 1 ಮೇ 2024, 12:22 IST
ಶಿಡ್ಲಘಟ್ಟ ತಾಲ್ಲೂಕಿನ ಮೇಲೂರಿನಲ್ಲಿ ಮಂಗಳವಾರ ರಾತ್ರಿ ಧರ್ಮರಾಯಸ್ವಾಮಿ ದ್ರೌಪತಮ್ಮನವರ 36ನೇ ವರ್ಷದ ಹೂವಿನ ಕರಗ ಮಹೋತ್ಸವ ನಡೆಯಿತು
ಶಿಡ್ಲಘಟ್ಟ ತಾಲ್ಲೂಕಿನ ಮೇಲೂರಿನಲ್ಲಿ ಮಂಗಳವಾರ ರಾತ್ರಿ ಧರ್ಮರಾಯಸ್ವಾಮಿ ದ್ರೌಪತಮ್ಮನವರ 36ನೇ ವರ್ಷದ ಹೂವಿನ ಕರಗ ಮಹೋತ್ಸವ ನಡೆಯಿತು   

ಶಿಡ್ಲಘಟ್ಟ: ತಾಲ್ಲೂಕಿನ ಮೇಲೂರಿನಲ್ಲಿ ಮಂಗಳವಾರ ರಾತ್ರಿ ಧರ್ಮರಾಯಸ್ವಾಮಿ ದ್ರೌಪತಮ್ಮನವರ 36ನೇ ವರ್ಷದ ಹೂವಿನ ಕರಗವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.

ಸಿದ್ಧಣ್ಣನವರ ಪುತ್ರ ಎಂ.ಎಸ್.ಅಭಿಲಾಷ್ ರಾತ್ರಿಯಿಡಿ ಕರಗ ಹೊತ್ತು ತಮಟೆಯ ವಾದನದೊಂದಿಗೆ ಊರೆಲ್ಲಾ ಮೆರವಣಿಗೆ ನಡೆಸಿದರು. ದಾರಿಯುದ್ದಕ್ಕೂ ಜನ ಮಲ್ಲಿಗೆ ಹೂ ಅರ್ಪಿಸಿ, ಆರತಿ ಬೆಳಗಿದರು. ಕೆಲವೆಡೆ ಮನೆ ಮುಂದೆ ಮತ್ತು ರಸ್ತೆಯಲ್ಲಿ ರಂಗೋಲಿ ಬಿಡಿಸಿ ಕರಗವನ್ನು ಸ್ವಾಗತಿಸಿದರು.

ಪರಿಮಳಯುಕ್ತ ಮಲ್ಲಿಗೆ ಹೂವಿಂದ ಅಲಂಕರಿಸಿದ್ದ ಕರಗ ಸುವಾಸನೆ ಬೀರುತ್ತಾ ಅಲೌಕಿಕ ಸನ್ನಿವೇಶ ಸೃಷ್ಟಿಸಿತ್ತು. ಹೂವಿನ ಕರಗಕ್ಕೂ ಮೊದಲು ಅನೇಕ ಧಾರ್ಮಿಕ ವಿಧಿ ವಿಧಾನಗಳು ನಡೆಯಿತು. ವೀರಕುಮಾರರು, ಗೌಡರು, ಗಣಾಚಾರಿ, ಘಂಟೆಪೂಜಾರರು ಹಾಗೂ ಚಾಕರಿದಾರರು ಶಕ್ತಿಪೀಠದಲ್ಲಿ ಕರಗಕರ್ತ ಪೂಜಾರಿಯನ್ನು ಕರಗ ಧರಿಸುವುದಕ್ಕೆ ಧಾರ್ಮಿಕ ಕೈಂಕರ್ಯ ನೆರವೇರಿಸಿದರು.

ADVERTISEMENT

ದ್ರೌಪತಮ್ಮನವರಿಗೆ ಕಲ್ಯಾಣೋತ್ಸವ, ಬಳೆ ತೊಡಿಸುವ ಶಾಸ್ತ್ರ ನಡೆಸಲಾಯಿತು.

ಕರಗದ ಪ್ರಯುಕ್ತ ಆರ್ಕೆಸ್ಟ್ರಾ, ವಾಲಗ, ತಮಟೆ ಮತ್ತು ವಾದ್ಯಗೋಷ್ಠಿಗಳು ಜನರಿಗೆ ಮುದ ನೀಡಿದವು.

ಶಾಸಕ ಬಿ.ಎನ್.ರವಿಕುಮಾರ್, ವಹ್ನಿಕುಲ ಕ್ಷತ್ರಿಯರ ಟ್ರಸ್ಟ್ ಸದಸ್ಯರು, ಸುತ್ತಮುತ್ತಲಿನ ಗ್ರಾಮಗಳ ಗ್ರಾಮಸ್ಥರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.