ADVERTISEMENT

ಆನೇಕಲ್: ಶಿವ ದೇಗುಲದಲ್ಲಿ ವಿಶೇಷ ಪೂಜೆ

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2021, 6:20 IST
Last Updated 30 ನವೆಂಬರ್ 2021, 6:20 IST
ಆನೇಕಲ್‌ನ ಶಿವ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರದ ಪ್ರಯುಕ್ತ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು
ಆನೇಕಲ್‌ನ ಶಿವ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರದ ಪ್ರಯುಕ್ತ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು   

ಆನೇಕಲ್:ತಾಲ್ಲೂಕಿನ ಶಿವ ದೇವಾಲಯಗಳಲ್ಲಿ ಕಡೆ ಕಾರ್ತೀಕ ಸೋಮವಾರದ ಪ್ರಯುಕ್ತ ವಿಶೇಷ ಪೂಜೆ, ಅಲಂಕಾರ ಮಾಡಲಾಗಿತ್ತು. ಸೋಮವಾರ ಬೆಳಿಗ್ಗಿನಿಂದಲೂ ನೂರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ಸ್ವಾಮಿಯ ದರ್ಶನ ಪಡೆದರು.

ತಾಲ್ಲೂಕಿನ ಮಾಸ್ತೇನಹಳ್ಳಿ ವೀರಭದ್ರಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಏರ್ಪಡಿಸಲಾಗಿತ್ತು. ಸ್ವಾಮಿಗೆ ಅಭಿಷೇಕ, ಅರ್ಚನೆ, ವಿಶೇಷ ಅಲಂಕಾರ ಮಾಡಲಾಗಿತ್ತು. ಭಕ್ತರು ದೇವಾಲಯದ ಮುಂಭಾಗದಲ್ಲಿ ದೀಪ ಹಚ್ಚುವ ಮೂಲಕ ಭಕ್ತಿ ಸಮರ್ಪಿಸಿದರು.

ತಾಲ್ಲೂಕಿನ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ, ಅಲಂಕಾರ, ಅನ್ನ ಸಂತರ್ಪಣೆ ನಡೆಯಿತು. ಗೆರಟಿಗನಬೆಲೆ ಪವಾಡ ಬಸವೇಶ್ವರ, ಬಯಲು ಬಸವೇಶ್ವರ ಸ್ವಾಮಿ, ನೆರಳೂರು ವಿಶ್ವನಾಥಸ್ವಾಮಿ, ಬಳ್ಳೂರು ಕ್ರಾಸ್‌ನ ಬೃಹದೀಶ್ವರ, ಪಟ್ಟಣದ ಥಳೀ ರಸ್ತೆಯ ಬಸವೇಶ್ವರ ಸ್ವಾಮಿ, ಉಮಾ ಮಹೇಶ್ವರ, ಜಲಕಂಠೇಶ್ವರ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಧಾರ್ಮಿಕ ಕಾರ್ಯಗಳು ಶ್ರದ್ಧಾ ಭಕ್ತಿಯಿಂದ ನಡೆದವು. ಹಳೇಹಳ್ಳಿಯ ಮುನೇಶ್ವರ ಸ್ವಾಮಿ ದೇವಾಲಯದಲ್ಲಿ ಲಕ್ಷ ದೀಪೋತ್ಸವ ಏರ್ಪಡಿಸಲಾಗಿತ್ತು. ಹಾಲ್ದೇನಹಳ್ಳಿ ಬಸವೇಶ್ವರ ಸ್ವಾಮಿ ದೇವಾಲಯದಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು. ಅಭಿಷೇಕ, ವಿಶೇಷ ಪೂಜೆಗಳು ನಡೆದವು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.