ADVERTISEMENT

ಹೆಣ್ಣು ಭ್ರೂಣ ಹತ್ಯೆ ಪ್ರಕರಣ: ಎಸ್‌ಪಿಜಿ ಆಸ್ಪತ್ರೆ ಮಾಲೀಕ ಡಾ.ಶ್ರೀನಿವಾಸ್ ಬಂಧನ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2023, 21:34 IST
Last Updated 16 ಡಿಸೆಂಬರ್ 2023, 21:34 IST
<div class="paragraphs"><p> ವೈದ್ಯ ಡಾ.ಶ್ರೀನಿವಾಸ್.</p></div>

ವೈದ್ಯ ಡಾ.ಶ್ರೀನಿವಾಸ್.

   

ಹೊಸಕೋಟೆ: ತಲೆಮರೆಸಿಕೊಂಡಿದ್ದ ಭ್ರೂಣ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ಎಸ್‌ಪಿಜಿ ಆಸ್ಪತ್ರೆಯ ಮಾಲೀಕ ಡಾ.ಶ್ರೀನಿವಾಸ್ ಅವರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಹೊಸಕೋಟೆ–ಬೆಂಗಳೂರು ರಸ್ತೆಯಲ್ಲಿ ಕಾರಿನಲ್ಲಿ ಹೊರಟಿದ್ದ ಡಾ.ಶ್ರೀನಿವಾಸ್ ಅವರನ್ನು ತಿರುಮಲಶೆಟ್ಟಿಹಳ್ಳಿ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಹೆಚ್ಚಿನ ವಿಚಾರಣೆಗೆ 12 ದಿನ ಪೊಲೀಸ್ ವಶಕ್ಕೆ ಪಡೆದಿದ್ದಾರೆ. 

ADVERTISEMENT

ಕಳೆದ ಬುಧವಾರ ಜಿಲ್ಲಾ ಆರೋಗ್ಯಾಧಿಕಾರಿ ನೇತೃತ್ವದ ಅಧಿಕಾರಿಗಳ ತಂಡ ತಿರುಮಲಶೆಟ್ಟಿಹಳ್ಳಿ ಕ್ರಾಸ್‌ನಲ್ಲಿರುವ ಎಸ್‌ಪಿಜಿ ಆಸ್ಪತ್ರೆಯ ಮೇಲೆ ದಾಳಿ ನಡೆಸಿತ್ತು. ಈ ವೇಳೆ ಸುಮಾರು ನಾಲ್ಕೈದು ತಿಂಗಳ ಹೆಣ್ಣು ಮಗುವಿನ ಭ್ರೂಣ ಹತ್ಯೆ ಮಾಡಿರುವುದನ್ನು ಪತ್ತೆ ಮಾಡಿತ್ತು.

ಅಂದಿನಿಂದ ಆಸ್ಪತ್ರೆಯ ಮಾಲಿಕ ಡಾ.ಶ್ರೀನಿವಾಸ್ ತಲೆಮರೆಸಿಕೊಂಡಿದ್ದರು. ಶ್ರೀನಿವಾಸ್ ಸೇರಿದಂತೆ ಐವರ ವಿರುದ್ಧ ತಿರುಮಲಶೆಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಪ್ರಕರಣದಲ್ಲಿ ಈಗಾಗಲೇ ನಾಲ್ವರನ್ನು ಬಂಧಿಸಿ, ನ್ಯಾಯಂಗ ಬಂಧನಕ್ಕೆ ಒಪ್ಪಿಸಲಾಗಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.