ADVERTISEMENT

ಆನೇಕಲ್ | ಚುಕ್ಕೆ ಜಿಂಕೆಗಳ ಭೇಟೆ: ಮತ್ತೊಬ್ಬ ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2025, 2:55 IST
Last Updated 21 ಸೆಪ್ಟೆಂಬರ್ 2025, 2:55 IST
<div class="paragraphs"><p>ಬಂಧನ</p></div>

ಬಂಧನ

   

(ಪ್ರಾತಿನಿಧಿಕ ಚಿತ್ರ)

ಆನೇಕಲ್: ತಾಲ್ಲೂಕಿನ ಕಕೃಷ್ಣನದೊಡ್ಡಿಯಲ್ಲಿ ಜೂನ್‌ 29ರಂದು ಚುಕ್ಕೆ ಜಿಂಕೆಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದ್ದು, ಬಂಧಿತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.

ADVERTISEMENT

ಕೃಷ್ಣನದೊಡ್ಡಿಯ ಡೊಮಿನಿಕ್‌ ರಾಜ್‌ ಬಂಧಿತ. ಇದುವರೆಗೆ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ. ಅರಣ್ಯ ಇಲಾಖೆಯು ಸಿಡಿಆರ್‌ ತಂತ್ರಜ್ಞಾನದ ಸಹಾಯದ ಮೂಲಕ ಆರೋಪಿಯ ಚಲನವಲನ ಗುರುತಿಸಿ ಬಂಧಿಸಲಾಗಿದೆ.

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ ಮತ್ತು ಕಗ್ಗಲಿಪುರ ಅರಣ್ಯ ವಲಯದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ. ಜೂನ್‌ 29ರಂದು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯಲ್ಲಿ ಚುಕ್ಕೆ ಜಿಂಕೆಗಳು ಭೇಟೆಯಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಾಪ್‌ ಸೇರಿದಂತೆ ಮೂರು ಮಂದಿಯನ್ನು ಬಂಧಿಸಿ, 74 ಕೆ.ಜಿ ಜಿಂಕೆ ಮಾಂಸವನ್ನು ವಶಪಡಿಸಿಕೊಳ್ಳಲಾಗಿತು ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗಣೇಶ್‌ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.