ADVERTISEMENT

ಶೇ 100 ರಷ್ಟು ಫಲಿತಾಂಶಕ್ಕೆ ಕ್ರಮ

​ಪ್ರಜಾವಾಣಿ ವಾರ್ತೆ
Published 7 ಜನವರಿ 2026, 2:55 IST
Last Updated 7 ಜನವರಿ 2026, 2:55 IST
ವಿಜಯಪುರ ಟೌನ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಎಸ್ಎಸ್‌ಲ್‌ಸಿ ಪೂರ್ವ ಸಿದ್ಧತಾ ಪರೀಕ್ಷಾ ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಬೈಲಾಂಜನಪ್ಪ ಸಂವಾದ ನಡೆಸಿದರು
ವಿಜಯಪುರ ಟೌನ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಎಸ್ಎಸ್‌ಲ್‌ಸಿ ಪೂರ್ವ ಸಿದ್ಧತಾ ಪರೀಕ್ಷಾ ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಬೈಲಾಂಜನಪ್ಪ ಸಂವಾದ ನಡೆಸಿದರು   

ವಿಜಯಪುರ (ದೇವನಹಳ್ಳಿ): ಜಿಲ್ಲೆಯಲ್ಲಿ ಈ ಬಾರಿಯ ಎಸ್ ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ 100 ರಷ್ಟು ಫಲಿತಾಂಶ ಸಾಧನೆ ಮಾಡಲು ಹಲವಾರು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬೈಲಾಂಜನಪ್ಪ ತಿಳಿಸಿದರು.

ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾಗಿದ್ದ ಪರೀಕ್ಷಾ ಪೂರ್ವ ಸಿದ್ಧತಾ ಪರೀಕ್ಷೆ ಪರಿಶೀಲಿಸಿ, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಬಳಿಕ ಮಾತನಾಡಿದರು.

ಈಗಾಗಲೇ ವಿದ್ಯಾರ್ಥಿಗಳಿಗೆ ಮೂರು ಹಂತದಲ್ಲಿ ಪೂರ್ವ ಸಿದ್ಧತೆ ಪರೀಕ್ಷೆ ಏರ್ಪಡಿಸಲಾಗಿದ್ದು, ಇದರಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಭಯ ಹೋಗಲಾಡಿಸುವುದು, ಆತ್ಮವಿಶ್ವಾಸ ಹೆಚ್ಚಿಸುವುದು, ವಿದ್ಯಾರ್ಥಿಗಳೆ ಸ್ವಯಂ ಮೌಲ್ಯಮಾಪನ ಮಾಡಿಕೊಳ್ಳುವುದರೊಂದಿಗೆ ತಮ್ಮ ಹಿಮ್ಮಾಹಿತಿ ಪಡೆಯಬಹುದು ಎಂದರು.

ADVERTISEMENT

ಪರೀಕ್ಷಾ ವೆಬ್‌ಸೆಟ್‍ನಲ್ಲಿ ಪ್ರತಿ ವಿಷಯಕ್ಕೂ ನಾಲ್ಕು ಮಾದರಿಗಳ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಿದ್ದು, 4,850 ಪ್ರಶ್ನೆಗಳು ಇರಲ್ಲಿದ್ದು, ಆ ಪ್ರಶ್ನೆಗಳಿಗೆ ವಿದ್ಯಾರ್ಥಿಗಳು ಉತ್ತರಿಸುವ ಮೂಲಕ ಪರೀಕ್ಷೆಗೆಪೂರ್ವ ಸಿದ್ಧತೆ ನಡೆಸಲು ಅನುಕೂಲವಾಗಲಿದೆ ಎಂದು ತಿಳಿಸಿದರು.

ಕಳೆದ ಸಾಲಿನಲ್ಲಿ ಜಿಲ್ಲೆಯ ಮೂವರು ವಿದ್ಯಾರ್ಥಿಗಳು 625ಅಂಕಕ್ಕೆ 625 ಅಂಕ ಪಡೆದಿದ್ದು, ಈ ಬಾರಿ ಹೆಚ್ಚಿನ ವಿದ್ಯಾರ್ಥಿಗಳು ಈ ಸಾಧನೆ ಮಾಡಬೇಕೆಂದು ಹೇಳಿದರು.

ಉಪ ಪ್ರಾಂಶುಪಾಲೆ ಕೋಮಲ, ಕನ್ನಡ ವಿಷಯ ಪರಿವೀಕ್ಷಕಿ ಪದ್ಮಾವತಿ, ಬಿ.ಎಸ್.ನಾರಾಯಣ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.