ADVERTISEMENT

ದೊಡ್ಡಬಳ್ಳಾಪುರ: ಕಾರ್ಮಿಕರಿಗೆ ಇಂದಿನಿಂದ ₹700 ಮೌಲ್ಯದ ದಿನಬಳಕೆ ವಸ್ತುಗಳ ಕಿಟ್

ದೊಡ್ಡಬಳ್ಳಾಪುರ ಎಪಿಎಂಸಿಗೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಭೇಟಿ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2020, 5:32 IST
Last Updated 8 ಏಪ್ರಿಲ್ 2020, 5:32 IST
ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಬುಧವಾರ ಬೆಳಿಗ್ಗೆ ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆಗೆ ಭೇಟಿ ನೀಡಿದರು
ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಬುಧವಾರ ಬೆಳಿಗ್ಗೆ ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆಗೆ ಭೇಟಿ ನೀಡಿದರು   

ದೊಡ್ಡಬಳ್ಳಾಪುರ: ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ ವಲಸೆ ಹಾಗೂ ಕಟ್ಟಡ ಕೂಲಿ ಕಾರ್ಮಿಕರಿಗೆ ₹700 ಮೌಲ್ಯದ ದಿನ ಬಳಕೆ ವಸ್ತುಗಳನ್ನು ಒಳಗೊಂಡ ಕಿಟ್‌ಗಳನ್ನು ಇಂದಿನಿಂದ ವಿತರಣೆ ಮಾಡಲು ಕಾರ್ಮಿಕ ಇಲಾಖೆ ವತಿಯಿಂದ ಕ್ರಮ ಕೈಗೊಳ್ಳಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.

ಬುಧವಾರ ಬೆಳಿಗ್ಗೆ ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆಗೆ ಭೇಟಿ ನೀಡಿದ್ದ ಅವರು ಪತ್ರಕರ್ತರೊಂದಿಗೆ ಮಾತನಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 20 ಸಾವಿರ ಕಿಟ್ಗಳನ್ನು ನೀಡಲಾಗುತ್ತಿದೆ. ಜಿಲ್ಲಾಡಳಿತ ಹೆಚ್ಚುವರಿಯಾಗಿ ಬೇಡಿಕೆಯನ್ನು ಸಲ್ಲಿಸಿದರು ಸರಬರಾಜು ಮಾಡಲಾಗುವುದು ಎಂದರು.

ಕಲ್ಲಂಗಡಿ, ಕರುಬೂಜಿ, ದ್ರಾಕ್ಷಿ ಹಣಗಳನ್ನು ಬೆಳೆದಿರುವ ರೈತರು ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್ಲಿ ಬೇಕಾದರು ಮಾರಾಟ ಮಾಡಲು ಸ್ಥಳೀಯ ಆಡಳಿತದ ಮೂಲಕ ಅನುಮತಿಯನ್ನು ನೀಡಲಾಗಿದೆ. ಹಣ್ಣು ಬೆಳೆಗಾರರು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲು ಇದು ಒಳ್ಳೆಯ ಅವಕಾಶವಾಗಿದೆ. ವಾಹನಗಳ ಮೂಲಕ ತಂದು ಮಾರಾಟ ಮಾಡಲು ಮುಂದಾಗಬೇಕು. ಕೃಷಿ ಹಾಗೂ ದಿನ ಬಳಕೆ ಸರಕು ಸಾಗಾಣಿಕೆ ವಾಹನಗಳನ್ನು ತಡೆಯದಂತೆ ಈಗಾಗಲೇ ಪೊಲೀಸ್ ಇಲಾಖೆಗೆ ಮುಖ್ಯಮಂತ್ರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ರೈತರು ಆತಂಕಕ್ಕೆ ಒಳಗಾಗಿ ಬೆಳೆಗಳನ್ನು ನಾಶ ಮಾಡದೆ ಸ್ಥಳೀಯ ಸೇರಿದಂತೆ ಅವಕಾಶ ಇರುವ ಯಾವುದೇ ಸ್ಥಳಕ್ಕೆ ಬೇಕಿದ್ದರು ತೆಗೆದುಕೊಂಡು ಹೋಗಿ ಮಾರಾಟ ಮಾಡಬಹುದಾಗಿದೆ. ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬೆಳೆಯಲಾಗಿರುವ ದ್ರಾಕ್ಷಿ ಹಣ್ಣುಗಳನ್ನು ಹೊರ ರಾಜ್ಯಗಳಿಗೆ ಸಾಗಾಣಿಕೆ ಮಾಡಲು ಸಹ ಅನುಮತಿ ನೀಡಲಾಗಿದೆ ಎಂದರು.

ADVERTISEMENT

ಈ ಸಂದರ್ಭದಲ್ಲಿ ಶಾಸಕ ಟಿ.ವೆಂಕಟರಮಣಯ್ಯ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜಯಮ್ಮ, ಎಪಿಎಂಸಿ ಅಧ್ಯಕ್ಷ ಮಂಜುನಾಥ್, ಕೃಷಿ ಮಾರಾಟ ಇಲಾಖೆ ನಿರ್ದೇಶಕ ಸಿ.ಎಸ್.ಕರೀಗೌಡ, ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.