ADVERTISEMENT

₹ 3 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 24 ಜುಲೈ 2022, 4:45 IST
Last Updated 24 ಜುಲೈ 2022, 4:45 IST
ಆನೇಕಲ್ ತಾಲ್ಲೂಕಿನ ಮಂಟಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳೇ ಸಂಪಗಿಹಳ್ಳಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಂ. ಕೃಷ್ಣಪ್ಪ ಭೂಮಿಪೂಜೆ ನೆರವೇರಿಸಿದರು
ಆನೇಕಲ್ ತಾಲ್ಲೂಕಿನ ಮಂಟಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳೇ ಸಂಪಗಿಹಳ್ಳಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಂ. ಕೃಷ್ಣಪ್ಪ ಭೂಮಿಪೂಜೆ ನೆರವೇರಿಸಿದರು   

ಆನೇಕಲ್: ತಾಲ್ಲೂಕಿನ ಮಂಟಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳೇ ಸಂಪಗಿಹಳ್ಳಿಯಲ್ಲಿ ₹ 3 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಎಂ. ಕೃಷ್ಣಪ್ಪ ಭೂಮಿಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ಕ್ಷೇತ್ರದ ಮಂಟಪ ಗ್ರಾಮ ಪಂಚಾಯಿತಿ ವ್ಯಾಪ್ತಿ ಒಟ್ಟು ₹ 12 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿವೆ. ಮಂಟಪ, ಕಲ್ಕೆರೆ, ಬೇಗಿಹಳ್ಳಿ, ವಾಜರಹಳ್ಳಿ ಗ್ರಾಮಗಳಲ್ಲಿ ತಲಾ ₹ 1 ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಹಳೇ ಸಂಪಗಿಹಳ್ಳಿಯಲ್ಲಿ ಕಾಂಕ್ರೀಟ್‌ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಗಿದೆ ಎಂದರು.

ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರವು ನಗರ ಮತ್ತು ಗ್ರಾಮೀಣ ಪ್ರದೇಶಗಳನ್ನು ಹೊಂದಿದೆ. ಗ್ರಾಮೀಣ ಭಾಗಗಳಿಗೆ ಹೆಚ್ಚಿನ ಅನುದಾನ ನೀಡುವ ಮೂಲಕ ಗ್ರಾಮಗಳಲ್ಲಿ ಸುಸಜ್ಜಿತ ರಸ್ತೆ, ಒಳಚರಂಡಿ, ಕುಡಿಯುವ ನೀರು ಸೇರಿದಂತೆ ಮೂಲಸೌಲಭ್ಯ ಕಲ್ಪಿಸಲು ಹೆಚ್ಚಿನ ಒತ್ತು ನೀಡಲಾಗಿದೆ ಎಂದು ತಿಳಿಸಿದರು.

ADVERTISEMENT

ಮಂಟಪ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಾಮಲಾ ಲೋಕೇಶ್‌, ಉಪಾಧ್ಯಕ್ಷ ಕಿರಣ್‌ಕುಮಾರ್‌, ಮುಖಂಡ ಜಯರಾಮ್‌, ಸದಸ್ಯರಾದ ಡಿ. ನಾಗೇಂದ್ರ, ರಮೇಶ್‌ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.