ADVERTISEMENT

ಸಾಧನೆಗೆ ಏಕಾಗ್ರತೆ, ಛಲ ಅವಶ್ಯ:

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2018, 13:12 IST
Last Updated 12 ಡಿಸೆಂಬರ್ 2018, 13:12 IST
ದೈಹಿಕ ಶಿಕ್ಷಣ ಶಿಕ್ಷಕ ಡಾ.ರಮೇಶಪ್ಪ ಅವರು ಶಿವಮೊಗ್ಗದಲ್ಲಿ ನಡೆದ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಮೂರು ಪದಕ ಪಡೆದಿದ್ದಾರೆ ( ಮಧ್ಯದಲ್ಲಿ ಇರುವವರು)
ದೈಹಿಕ ಶಿಕ್ಷಣ ಶಿಕ್ಷಕ ಡಾ.ರಮೇಶಪ್ಪ ಅವರು ಶಿವಮೊಗ್ಗದಲ್ಲಿ ನಡೆದ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಮೂರು ಪದಕ ಪಡೆದಿದ್ದಾರೆ ( ಮಧ್ಯದಲ್ಲಿ ಇರುವವರು)   

ವಿಜಯಪುರ: ಸಾಧನೆ ಮಾಡಲು ಏಕಾಗ್ರತೆ ಮತ್ತು ಛಲ ಅವಶ್ಯ. ಇದಕ್ಕಾಗಿ ಸಮಯ ಮೀಸಲಿಟ್ಟಾಗ ಸಾಧನೆ ಶಿಖರವೇರಲು ಸಾಧ್ಯ ಎಂದು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ಪಿ. ವೆಂಕಟೇಶ್ ಅಭಿಪ್ರಾಯಪಟ್ಟರು.

ಶಿವಮೊಗ್ಗದಲ್ಲಿ ನಡೆದ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಮೂರು ಪದಕ ಗಳಿಸಿರುವ ಡಾ.ರಮೇಶಪ್ಪ ಅವರನ್ನು ಅಭಿನಂದಿಸಿ ಅವರು ಮಾತನಾಡಿದರು.

ಕಲಿಕೆ ಮತ್ತು ಸಾಧನೆ ಮಾಡಬೇಕೆನ್ನುವ ಹಂಬಲ ನಿರಂತರವಾದ ಪ್ರಕ್ರಿಯೆಯಾಗಿದೆ. ಅದನ್ನು ಏಕಾಗ್ರತೆಯಿಂದ ಕಾರ್ಯಗತಗೊಳಿಸಬೇಕೆಂದು ಸಲಹೆ ನೀಡಿದರು.

ADVERTISEMENT

ಪ್ರತಿಯೊಬ್ಬರೂ ಶಿಕ್ಷಣ, ಕ್ರೀಡೆ, ಸಂಗೀತ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವ ಕಲಾ ಚಾತುರ್ಯ ಇದ್ದರೂ ಸಂಪನ್ಮೂಲಗಳ ಕೊರತೆಯಿಂದಾಗಿ ಕಳೆದುಕೊಳ್ಳುವಂತಾಗಿದೆ ಎಂದು ವಿಷಾದಿಸಿದರು.

ಪ್ರಶಸ್ತಿ ವಿಜೇತ ಶಿಕ್ಷಕ ಡಾ.ರಮೇಶಪ್ಪ ಮಾತನಾಡಿ, ‘ನನ್ನ ಪರಿಶ್ರಮ ಶಾಲೆ ಮಕ್ಕಳಿಗೆ ಸ್ಫೂರ್ತಿಯಾಗಬೇಕು ಎನ್ನುವ ಉದ್ದೇಶದಿಂದ ಬಿಡುವಿನ ಸಮಯವನ್ನು ಕ್ರೀಡೆಗೆ ಮೀಸಲು ಇಟ್ಟಿದ್ದೇನೆ. ಮಕ್ಕಳು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಉತ್ತಮ ಸಾಧನೆ ಜತೆಗೆ ಬುದ್ಧಿಶಕ್ತಿ ಹೆಚ್ಚಿಸಿಕೊಳ್ಳಲು ಸಾಧ್ಯವಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.