ADVERTISEMENT

28ರಂದು ರಾಜ್ಯಮಟ್ಟದ ಸವಿತಾ ಮಹರ್ಷಿ ಜಯಂತಿ ಆಚರಣೆ

​ಪ್ರಜಾವಾಣಿ ವಾರ್ತೆ
Published 26 ಜನವರಿ 2023, 5:13 IST
Last Updated 26 ಜನವರಿ 2023, 5:13 IST
ದೇವನಹಳ್ಳಿ ತಾಲ್ಲೂಕು ಬೂದಿಗೆರೆ ಗ್ರಾಮದ ಸ್ಟರ್ಲಿಂಗ್‌ ಶಾಲಾ ಆವರಣದಲ್ಲಿ ಪೋಷಕರ ಸಭೆ ನಡೆಯಿತು
ದೇವನಹಳ್ಳಿ ತಾಲ್ಲೂಕು ಬೂದಿಗೆರೆ ಗ್ರಾಮದ ಸ್ಟರ್ಲಿಂಗ್‌ ಶಾಲಾ ಆವರಣದಲ್ಲಿ ಪೋಷಕರ ಸಭೆ ನಡೆಯಿತು   

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ರಾಜ್ಯ ಸವಿತಾ ಸಮಾಜದಿಂದ ರಾಜ್ಯಮಟ್ಟದ ಸವಿತಾ ಮಹರ್ಷಿ ಜಯಂತ್ಯುತ್ಸವ ಸಮಾರಂಭವು ಜ. 28ರಂದು ಬೆಳಿಗ್ಗೆ 11ಗಂಟೆಗೆ ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ.

ಅಂದು ಬೆಳಿಗ್ಗೆ 10ಗಂಟೆಗೆ ವೇಣುಗೋಪಾಲಸ್ವಾಮಿ ದೇವಸ್ಥಾನದಿಂದ ಡಾ.ಬಿ.ಆರ್. ಅಂಬೆಡ್ಕರ್ ಭವನದವರೆಗೆ ನಾದಸ್ವರ, ಡೋಲು ಕಲಾವಿದರು ಹಾಗೂ ಜನಪದ ಕಲಾ ತಂಡಗಳೊಂದಿಗೆ ಸವಿತಾ ಮಹರ್ಷಿಯ ಭಾವಚಿತ್ರದ ಮೆರವಣಿಗೆ ನಡೆಯಲಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ. ಸುಧಾಕರ್, ಪೌರಾಡಳಿತ ಸಚಿವ ಎಂ.ಟಿ.ಬಿ. ನಾಗರಾಜ್, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್‌ಕುಮಾರ್ ಭಾಗವಹಿಸಲಿದ್ದಾರೆ. ಶಾಸಕ ನಿಸರ್ಗ ನಾರಾಯಣಸ್ವಾಮಿ ಕಾರ್ಯಕ್ರಮದ ಅಧ್ಯಕ್ಷತೆವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.