ADVERTISEMENT

ರಾತ್ರಿ ಕರ್ಫ್ಯೂ ಕಟ್ಟುನಿಟ್ಟಿನ ಜಾರಿ

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2020, 3:37 IST
Last Updated 24 ಡಿಸೆಂಬರ್ 2020, 3:37 IST
ಟಿ.ರಂಗಪ್ಪ
ಟಿ.ರಂಗಪ್ಪ   

ದೊಡ್ಡಬಳ್ಳಾಪುರ: ಕೊರೊನಾ ಸೋಂಕು ಹರಡುವಿಕೆ ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ರಾತ್ರಿ ಕರ್ಫ್ಯೂ ಜಾರಿಗೊಳಿಸಿರುವ ಮಾರ್ಗಸೂಚಿ ಅನ್ವಯ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಡಿವೈಎಸ್‌ಪಿ ಟಿ.ರಂಗಪ್ಪ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿ, ಸರ್ಕಾರದ ಕ್ರಮ ಸಾರ್ವಜನಿಕರ ಆರೋಗ್ಯ ಹಾಗೂ ಒಳತಿಗಾಗಿಯೇ ಇದೆಯೇ ಹೊರತು. ತೊಂದರೆ ನೀಡುವ ಸಲುವಾಗಿ ಅಲ್ಲ. ಇದನ್ನು ಸಾರ್ವಜನಿಕರು ಅರ್ಥ ಮಾಡಿಕೊಳ್ಳಬೇಕಿದೆ. ಜನರ ಆರೋಗ್ಯ ಕಾಪಾಡುವ ಸಲುವಾಗಿ ಪೊಲೀಸರು ರಾತ್ರಿ ವೇಳೆ ಕಟ್ಟುನಿಟ್ಟಿನ ಗಸ್ತು ನಡೆಸಲಿದ್ದಾರೆ. ಕರ್ಫ್ಯೂ ಸಂದರ್ಭದಲ್ಲಿ ಅನವಶ್ಯಕವಾಗಿ ಸಂಚರಿಸದೆ ಸಹಕರಿಸಬೇಕು. ತುರ್ತು ಸೇವೆಗಳಿಗೆ ಸರ್ಕಾರ ವಿನಾಯಿತಿ ಪ್ರಕಟಿಸಿದೆ. ಮಾಧ್ಯಮಗಳ ಮೂಲಕ ಪ್ರಕಟವಾಗುವ ಸರ್ಕಾರದ ಮಾರ್ಗದರ್ಶಿ ಸೂಚನೆ ತಿಳಿದುಕೊಳ್ಳುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.

ಸ್ವದೇಶಕ್ಕೆ ಮರಳಿದ 3 ಜನ: ಲಂಡನ್‌ನಲ್ಲಿ ಕೊರೊನಾ ಹೊಸ ರೂಪಾಂತರ ಪಡೆದುಕೊಂಡಿರುವ ಬಗ್ಗೆ ವರದಿಗಳ ಬಂದ ನಂತರ ವಿದೇಶದಿಂದ ಬರುತ್ತಿರುವ ಎಲ್ಲರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಸರ್ವೇಕ್ಷಣ ಅಧಿಕಾರಿ ಡಾ.ಧರ್ಮೇಂದ್ರೆ ತಿಳಿಸಿದರು.

ADVERTISEMENT

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಮೂರು ಜನ ಬಂದಿದ್ದಾರೆ. ಮೂರು ಜನರು ಸಹ ಆರೋಗ್ಯವಾಗಿದ್ದಾರೆ. ಕೊರೊನಾ ನೆಗಟಿವ್‌ ವರದಿ ಬಂದಿದೆ. ಹೋಂ ಐಸುಲೇಷನ್‌ನಲ್ಲಿ ಇದ್ದಾರೆ. ಇವರ ಆರೋಗ್ಯದ ಮೇಲೆ ನಿಗಾವಹಿಸಲಾಗುತ್ತಿದೆ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.