ADVERTISEMENT

ಫಲಿತಾಂಶ ಸುಧಾರಣೆಗೆ ಶ್ರಮಿಸಿ :ಸಿಇಒ ಎನ್.ಎಂ.ನಾಗರಾಜು

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2019, 16:50 IST
Last Updated 24 ಡಿಸೆಂಬರ್ 2019, 16:50 IST
ಸಭೆಯಲ್ಲಿ ಸಿಇಒ ಎನ್.ಎಂ.ನಾಗರಾಜ್ ಇತರರು ಇದ್ದರು
ಸಭೆಯಲ್ಲಿ ಸಿಇಒ ಎನ್.ಎಂ.ನಾಗರಾಜ್ ಇತರರು ಇದ್ದರು   

ದೇವನಹಳ್ಳಿ: ಖಾಸಗಿ ಅನುದಾನರಹಿತ ಪ್ರೌಢಶಾಲಾ ಆಡಳಿತ ಮಂಡಳಿಯವರು ತಮ್ಮ ಶಾಲೆ ನೆರೆ-ಹೊರೆಯಲ್ಲಿರುವ ಸರ್ಕಾರಿ ಮತ್ತು ಅನುದಾನಿತ ಪ್ರೌಢಶಾಲೆಗಳನ್ನು ಶೈಕ್ಷಣಿಕವಾಗಿ ದತ್ತು ತೆಗೆದುಕೊಂಡು ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗೆ ನೆರವಾಗಬೇಕೆಂದು ಸಿಇಒ ಎನ್.ಎಂ.ನಾಗರಾಜು ಸೂಚಿಸಿದರು.

ಜಿಲ್ಲಾ ಪಂಚಾಯತಿ ಕಚೇರಿ ಸಭಾಂಗಣದಲ್ಲಿ ಹತ್ತನೇ ತರಗತಿ ಮಕ್ಕಳ ಕಲಿಕಾ ಪ್ರಗತಿ ಪರಿಶೀಲನೆ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಫಲಿತಾಂಶ ಸುಧಾರಣೆ ಬಗ್ಗೆ ಸಮಾಲೋಚನೆ ನಡೆಸಿದರು.

ಮೇಲ್ವಿಚಾರಣಾಧಿಕಾರಿಗಳು ಕಡ್ಡಾಯವಾಗಿ ತಮಗೆ ವಹಿಸಿರುವ ಪ್ರೌಢಶಾಲೆಗಳಿಗೆ ನಿಯಮಿತವಾಗಿ ಭೇಟಿ ನೀಡಿ ‍ಫಲಿತಾಂಶ ಸುಧಾರಣೆಗೆ ಅಗತ್ಯ ಮಾರ್ಗದರ್ಶನ ನೀಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೃಷ್ಣಮೂರ್ತಿ ತಿಳಿಸಿದರು.

ADVERTISEMENT

ಸಭೆಯಲ್ಲಿ ಮುಖ್ಯ ಲೆಕ್ಕಾಧಿಕಾರಿ ಟಿ.ಆರ್.ಶೋಭಾ, ಬೆಂಗಳೂರು ಅಂತರರಾಷ್ಟ್ರೀಯ ವಿಮಾನನಿಲ್ದಾಣ ಆಡಳಿತ ಸಂಸ್ಥೆ ಪ್ರತಿನಿಧಿ ಪ್ರತಿಭಾ, ಶಿಕ್ಷಣಾಧಿಕಾರಿ ಹನುಮಂತಪ್ಪ, ನಾಲ್ಕು ತಾಲ್ಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಉಪಯೋಜನಾ ಸಮನ್ವಯಾಧಿಕಾರಿಗಳು, ವಿಷಯ ಪರಿವೀಕ್ಷಕರು, ಡಯಟ್ ಹಿರಿಯ ಮತ್ತು ಕಿರಿಯ ಉಪನ್ಯಾಸಕರು, ಜಿಲ್ಲೆಯ ಎಲ್ಲ ಪ್ರೌಢಶಾಲಾ ಮುಖ್ಯಶಿಕ್ಷಕರು, ಶಾಲಾ ಮೇಲ್ವಿಚಾರಣಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.