ADVERTISEMENT

ನೆಲಮಂಗಲ | ವಿದ್ಯಾರ್ಥಿನಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 25 ಜುಲೈ 2025, 19:40 IST
Last Updated 25 ಜುಲೈ 2025, 19:40 IST
ತನುಶ್ರೀ
ತನುಶ್ರೀ   

ನೆಲಮಂಗಲ: ಮಾಗಡಿ ರಸ್ತೆ ಬ್ಯಾಡರಹಳ್ಳಿ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರವಿ ಮತ್ತು ಶ್ವೇತಾ ದಂಪತಿಯ ಮಗಳು ತನುಶ್ರೀ(17) ಆತ್ಮಹತ್ಯೆ ಮಾಡಿಕೊಂಡವರು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಎರಡು ಬಾರಿ ಅನುತ್ತೀರ್ಣಗೊಂಡಿದ್ದರು. ಮೂರನೇ ಬಾರಿ ಪರೀಕ್ಷೆ ಬರೆದಿದ್ದು, ಅದರ ಫಲಿತಾಂಶ ಗುರುವಾರ ಪ್ರಕಟವಾಗಿತ್ತು. ಅದರಲ್ಲಿಯೂ ಅನುತ್ತೀರ್ಣರಾಗಿರುವುದು ಗೊತ್ತಾಗಿ ಈ ಕೃತ್ಯ ಎಸಗಿದ್ದಾರೆ ಎಂದು ಶಂಕಿಸಲಾಗಿದೆ. 

ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು. ಮಾದನಾಯಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.