ADVERTISEMENT

ವಿಜಯಪುರ: ತಿಮ್ಮಕ್ಕ ನೆನಪಲ್ಲಿ ಸಸಿ ನಾಟಿ ಮಾಡಿದ ಮಕ್ಕಳು

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2025, 3:54 IST
Last Updated 16 ನವೆಂಬರ್ 2025, 3:54 IST
<div class="paragraphs"><p>ವಿಜಯಪುರದ ಪ್ರಗತಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ ಹಾಗೂ ಕನ್ನಡ ರಾಜ್ಯೋತ್ಸವ ನಡೆಯಿತು</p></div>

ವಿಜಯಪುರದ ಪ್ರಗತಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ ಹಾಗೂ ಕನ್ನಡ ರಾಜ್ಯೋತ್ಸವ ನಡೆಯಿತು

   

ವಿಜಯಪುರ (ದೇವನಹಳ್ಳಿ): ಪಟ್ಟಣದ ಪ್ರಗತಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ ಹಾಗೂ ಕನ್ನಡ ರಾಜ್ಯೋತ್ಸವ ನಡೆಯಿತು.

ಮಕ್ಕಳು ಇತ್ತೀಚೆಗೆ ನಿಧನರಾದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ ನೆನಪಿನಲ್ಲಿ ಎರಡು ಗಿಡಗಳನ್ನು ನೆಟ್ಟು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

ADVERTISEMENT

ಶಾಲಾ ವಿದ್ಯಾರ್ಥಿ ಕೆ.ವರುಣ್ ಕುಮಾರ್ ಮಕ್ಕಳ ದಿನಾಚರಣೆ ಕುರಿತು ಮಾತನಾಡಿದರು. ವಿದ್ಯಾರ್ಥಿನಿ ಕೆ.ಎನ್. ಚರಿತ ಅವರು ಕನ್ನಡ ರಾಜ್ಯೋತ್ಸವದ ಬಗ್ಗೆ ತಿಳಿಸಿಕೊಟ್ಟರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.