ADVERTISEMENT

ಕೋಳಿ ಸಾಕಾಣಿಕೆ ಕೇಂದ್ರಕ್ಕೆ ಸಹಾಯಧನ

​ಪ್ರಜಾವಾಣಿ ವಾರ್ತೆ
Published 22 ಜುಲೈ 2021, 4:23 IST
Last Updated 22 ಜುಲೈ 2021, 4:23 IST

ದೇವನಹಳ್ಳಿ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ 2019-20ನೇ ಸಾಲಿನಲ್ಲಿ ವಿಶೇಷ ಕೇಂದ್ರಿಯ ನೆರವಿನಡಿ ಪರಿಶಿಷ್ಟ ಪಂಗಡದವರಿಗೆ ಕೋಳಿ ಸಾಕಾಣಿಕೆ ಕೇಂದ್ರ ಸ್ಥಾಪಿಸಲು ಸಹಾಯಧನ ನೀಡುವ ಕಾರ್ಯಕ್ರಮಕ್ಕೆ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಫಲಾನುಭವಿಗಳು ಸಮಾಜ ಕಲ್ಯಾಣ ಇಲಾಖೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕು ಕಚೇರಿಗಳಲ್ಲಿ ಅರ್ಜಿ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಜು.31ರೊಳಗಾಗಿ ಸಂಬಂಧಪಟ್ಟ ತಾಲ್ಲೂಕಿನ ಸಹಾಯಕ ನಿರ್ದೇಶಕರ ಕಚೇರಿಗಳಿಗೆ ಸಲ್ಲಿಸಬೇಕು.

ಅರ್ಜಿದಾರರು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ಅರ್ಜಿದಾರರು ಕರ್ನಾಟಕದವರಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆ ನಿವಾಸಿಯಾಗಿರಬೇಕು. ಅರ್ಜಿದಾರರ ವಯಸ್ಸು 18 ರಿಂದ 60 ವರ್ಷದ ಒಳಗಿರಬೇಕು. ಫಲಾನುಭವಿಗಳ ವಾರ್ಷಿಕ ಆದಾಯ ₹ 1.50 ಲಕ್ಷದೊಳಗೆ ಇರತಕ್ಕದ್ದು. ಅರ್ಜಿದಾರರು ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರು ಸರ್ಕಾರಿ ನೌಕರಿಯಲ್ಲಿರಬಾರದು.

ADVERTISEMENT

ಅರ್ಜಿದಾರರಾಗಲಿ, ಕುಟುಂಬದ ಸದಸ್ಯರಾಗಲಿ ನಿಗಮದ ಯಾವುದೇ ಯೋಜನೆಯಡಿ ಈ ಹಿಂದೆ ಯಾವುದೇ ಸೌಲಭ್ಯ ಪಡೆದಿರಬಾರದು. ಅರ್ಜಿದಾರರು ಬಿಪಿಎಲ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಹೊಂದಿರಬೇಕು. ಸದರಿ ಘಟಕದ ವೆಚ್ಚ ₹ 5.50 ಲಕ್ಷ ಆಗಿದ್ದು, ಇಲಾಖೆ ವತಿಯಿಂದ ಶೇ 75ರಷ್ಟು ಅಂದರೆ ₹ 4,12,500 ಸಹಾಯಧನ ನೀಡಲಾಗುವುದು. ಶೇ 25ರಷ್ಟು ಅಂದರೆ ₹ 1,37,500 ಫಲಾನುಭವಿ ಭರಿಸಬೇಕು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪಶು ಸಂಗೋಪನೆ ಇಲಾಖೆಯಿಂದ ಅನುಮತಿ ಪತ್ರ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿ, ದೂರವಾಣಿ ಸಂಖ್ಯೆ 080-29787448, ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ದೇವನಹಳ್ಳಿ– ದೂರವಾಣಿ ಸಂಖ್ಯೆ 080-27681784, ದೊಡ್ಡಬಳ್ಳಾಪುರ–ದೂರವಾಣಿ ಸಂಖ್ಯೆ 080-27623681, ಹೊಸಕೋಟೆ-ದೂರವಾಣಿ ಸಂಖ್ಯೆ 080-27931528, ನೆಲಮಂಗಲ-ದೂರವಾಣಿ ಸಂಖ್ಯೆ 080-27723172 ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.