ಸೂಲಿಬೆಲೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮಂಗಳವಾರ ಹೊಸಕೋಟೆ ತಾಲ್ಲೂಕಿನ ಹಸಿಗಾಳ ಗ್ರಾಮದಲ್ಲಿ ‘ಸುಗ್ಗಿ ಹುಗ್ಗಿ’ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಧವಸಧಾನ್ಯಗಳ ರಾಶಿಗೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಶಾಸಕ ಶರತ್ ಬಚ್ಚೇಗೌಡ ಚಾಲನೆ ನೀಡಿದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿ. ಪ್ರಸಾದ್, ಉಪಾಧ್ಯಕ್ಷೆ ರೂಪಾ ಮರಿಯಪ್ಪ, ತಾಲ್ಲೂಕು ಪಂಚಾಯಿತಿ ಸದಸ್ಯ ಮಂಜುನಾಥ್, ಸಹಕಾರ ಬ್ಯಾಂಕ್ ಅಧ್ಯಕ್ಷ ಬಿ.ವಿ. ಸತೀಶಗೌಡ, ನಾರಾಯಣಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ ಆರಾಧ್ಯ, ಗ್ರಾಮ ಪಂಚಾಯಿತಿ ಸದಸ್ಯರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.