ADVERTISEMENT

ಕ್ರೀಡಾ, ಸಾಂಸ್ಕೃತಿಕ ಚಟುವಟಿಕೆ: ಬಿ.ಎನ್.ಗೋಪಾಲಗೌಡ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2026, 8:40 IST
Last Updated 11 ಫೆಬ್ರುವರಿ 2026, 8:40 IST
ಸೂಲಿಬೆಲೆ ಸರ್ಕಾರಿ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಕಳೆದ ಸಾಲಿನಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು
ಸೂಲಿಬೆಲೆ ಸರ್ಕಾರಿ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಕಳೆದ ಸಾಲಿನಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು   

ಸೂಲಿಬೆಲೆ (ಹೊಸಕೋಟೆ): ‘ಪದವಿ ಪೂರ್ವ ಕಾಲೇಜಿನ ಸರ್ವಾಂಗೀಣ ಅಭಿವೃದ್ಧಿಯ ಹೊಣೆ ನಮಗೆ ಬಿಟ್ಟುಬಿಡಿ. ಆದರೆ ಕಾಲೇಜು ಹಂತದಲ್ಲಿ ವಿದ್ಯೆಯನ್ನು ಸಂಸ್ಕಾರ ನಿಡುವ ರೀತಿಯಲ್ಲಿ ನಿಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಿ’ ಎಂದು ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಬಿ.ಎನ್.ಗೋಪಾಲಗೌಡ ಹೇಳಿದರು.

ಸೂಲಿಬೆಲೆಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಖಜಾಂಚಿ ವಿ.ಪ್ರಸಾದ್ ಮಾತನಾಡಿ, ವಿದ್ಯಾರ್ಥಿ ದಿಸೆಯಲ್ಲಿ ಶಿಸ್ತು, ಸಂಯಮ ಮೈಗೂಡಿಸಿಕೊಳ್ಳಬೇಕು. ಓದಿನ ಕಡೆ ಹೆಚ್ಚು ಅಸಕ್ತಿ ವಹಿಸಬೇಕು. ಕಠಿಣ ಪರಿಶ್ರಮದಿಂದ ಮಾತ್ರ ಸಾಧನೆ ಮಾಡಲು ಸಾಧ್ಯ ಎಂದು ಹೇಳಿದರು.

ADVERTISEMENT

ವಿದ್ಯಾರ್ಥಿಗಳಿಗೆ ಬಮೂಲ್ ನಿರ್ದೇಶಕ ಬಿ.ವಿ.ಸತೀಶಗೌಡರ ನಂದಿನಿ ಪೇಡಾ, ನಂದಿನಿ ಮಜ್ಜಿಗೆ ಹಾಗೂ ಊಟದ ವ್ಯವಸ್ಥೆ ಕಲ್ಪಿಸಿಕೊಟ್ಟರು.

ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಬಾಷಾ, ಪ್ರಾಂಶುಪಾಲ ಮಂಜುನಾಥ್, ಜನಾರ್ದನರೆಡ್ಡಿ, ನಗರೇನಹಳ್ಳಿ ನಾಗರಾಜಪ್ಪ, ವೆಂಕಟೇಶ್, ಜಿಯಾವುಲ್ಲಾ, ಪ್ರಶಾಂತ್, ಬೆಟ್ಟಹಳ್ಳಿ ಗೋಪಿನಾಥ್, ರಾಜೇಶ್ವರಿ, ಕೆ.ಎಂ.ಚೌಡೇಗೌಡ, ಸುಬ್ರಮಣಿ, ಕುಮಾರ್, ಸರಸ್ವತಿ, ರೇಣುಕಾ, ಶ್ರೀಕೃಪಾ, ಮೃತ್ಯುಂಜಯ, ನಾಗರಾಜ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.