ADVERTISEMENT

ವಿಜಯಪುರ: ಸಂಗೀತ ನಿರ್ದೇಶಕ ಹಂಸಲೇಖ ಹೇಳಿಕೆಗೆ ಬೆಂಬಲ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2021, 4:40 IST
Last Updated 29 ನವೆಂಬರ್ 2021, 4:40 IST

ವಿಜಯಪುರ:ಸಂಗೀತ ನಿರ್ದೇಶಕ ಹಂಸಲೇಖ ಅವರ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿರುವುದು ಖಂಡನೀಯ ಎಂದು ಬಿಜ್ಜವಾರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನಾಗರಾಜ್ ಹೇಳಿದರು.

ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಭಾನುವಾರ ಮಾತನಾಡಿದ ಅವರು, ಹಂಸಲೇಖ ಅವರು ಸಮಾಜದ ಸ್ಥಿತಿಯನ್ನು ತಿಳಿಸಿದ್ದಾರೆ. ಪೇಜಾವರ ಸ್ವಾಮೀಜಿ ದಲಿತರ ಕಾಲೊನಿಗಳಿಗೆ ಭೇಟಿ ನೀಡಿದ ಮಾತ್ರಕ್ಕೆ ಜಾತಿ ವ್ಯವಸ್ಥೆ ತೊಲಗಿ ಹೋಗುವುದಿಲ್ಲ. ಅಸ್ಪೃಶ್ಯತೆ ನಿಲ್ಲುವುದಿಲ್ಲ. ಅವರು ಹೇಳಿದ ಕೆಲವು ಮಾತುಗಳಿಂದ ಮೇಲ್ವರ್ಗದ ಜನರಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅವರು ಕ್ಷಮೆ ಕೇಳಬೇಕು ಎಂದು ಒತ್ತಾಯಿಸುತ್ತಿರುವುದು ಸರಿಯಲ್ಲ ಎಂದರು.

ಶತಮಾನಗಳಿಂದ ಶೋಷಣೆಗೆ ಒಳಗಾಗಿ ದಿನನಿತ್ಯ ಅಸ್ಪೃಶ್ಯತೆಯೆಂಬ ನರಕದಲ್ಲಿ ಸಿಲುಕಿಕೊಂಡು ಪರದಾಡುತ್ತಿರುವ ಜನರಿಗೆ ನೋವಾಗುವುದಿಲ್ಲವೇ, ದೇಶದಲ್ಲಿ ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಲಾಗುತ್ತಿದೆ ಎಂದು ಹೇಳಿದರು.

ADVERTISEMENT

ಕೇಲವರು ಬಾಯಿ ಮಾತಿನಲ್ಲಿ ಸಂವಿಧಾನದ ಬಗ್ಗೆ ಮಾತನಾಡುತ್ತಾರೆ. ಹಂಸಲೇಖ ಅವರು ತಮಗಿರುವ ವಾಕ್ ಸ್ವಾತಂತ್ರ್ಯದ ನೆಲೆಗಟ್ಟಿನಲ್ಲಿ ವಾಸ್ತವಾಂಶವನ್ನು ಬಿಚ್ಚಿಟ್ಟಿದ್ದಾರೆ. ಸತ್ಯ ಹೇಳಿರುವುದೇ ತಪ್ಪು ಎಂದು ಆಕ್ರೋಶ ವ್ಯಕ್ತಪಡಿಸುತ್ತಿರುವುದು ಖಂಡನೀಯ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.