ADVERTISEMENT

ಸುರಗಜಕ್ಕನಹಳ್ಳಿ ಗ್ರಾ.ಪಂ. ಉಪಾಧ್ಯಕ್ಷರ ಆಯ್ಕೆ

​ಪ್ರಜಾವಾಣಿ ವಾರ್ತೆ
Published 10 ಜುಲೈ 2022, 5:59 IST
Last Updated 10 ಜುಲೈ 2022, 5:59 IST
ಆನೇಕಲ್ ತಾಲ್ಲೂಕಿನ ಸುರಗಜಕ್ಕನಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ಆಯ್ಕೆಯಾದ ಚಂದ್ರಶೇಖರ್ ಅವರನ್ನು ಮುಖಂಡರು ಅಭಿನಂದಿಸಿದರು
ಆನೇಕಲ್ ತಾಲ್ಲೂಕಿನ ಸುರಗಜಕ್ಕನಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ಆಯ್ಕೆಯಾದ ಚಂದ್ರಶೇಖರ್ ಅವರನ್ನು ಮುಖಂಡರು ಅಭಿನಂದಿಸಿದರು   

ಆನೇಕಲ್: ತಾಲ್ಲೂಕಿನ ಸುರಗಜಕ್ಕನಹಳ್ಳಿ ಗ್ರಾಮ ಪಂಚಾಯಿತಿಯ ನೂತನ ಉಪಾಧ್ಯಕ್ಷರಾಗಿ ಚಂದ್ರಶೇಖರ್‌ ಅವಿರೋಧ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿದ್ದ ರಾಜಪ್ಪ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು. ಚಂದ್ರಶೇಖರ್‌ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾದರು.

ಬಳಿಕಮಾತನಾಡಿದ ಅವರು, ಸುರಗಜಕ್ಕನಹಳ್ಳಿ ಪಂಚಾಯಿತಿಯ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಾಗುವುದು. ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ಅಧ್ಯಕ್ಷರ ಮತ್ತು ಸದಸ್ಯರ ಸಹಕಾರದಿಂದ ಮೂಲ ಸೌಲಭ್ಯ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು.

ADVERTISEMENT

ಅಧ್ಯಕ್ಷೆ ಲಲಿತಾ ಮಹದೇವಯ್ಯ ಮಾತನಾಡಿ, ಸುರಗಜಕ್ಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವುದು ನಮ್ಮ ಗುರಿ. ಮುಂದಿನ ದಿನಗಳಲ್ಲಿ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದುತಿಳಿಸಿದರು.

ಸದಸ್ಯರಾದ ರಾಜಪ್ಪ, ಶ್ರೀರಾಮ್, ಮಹಮದ್‌ ಶೌಕತ್‌, ಮುನಿರಾಜು, ರಾಜೇಂದ್ರ, ಮುನಿಲಕ್ಷ್ಮಿ, ಶಶಿಕಲಾ ಗೋಪಾಲ್‌, ಚಿನ್ನಮ್ಮ ದೇವರಾಜ್, ಜಮುನಾ ರಾಣಿ, ಮುನಿಕೃಷ್ಣ, ಬೇಬಿ ರಘು, ಮಂಜುಳಾ ಸಂಪಂಗಿ, ಕಮಲಮ್ಮ, ಹೀನಾ ಕೌಸರ್‌ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.